ಕಾಸರಗೋಡು:ಕಾರು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ಆದಿತ್ಯವಾರ ಸಂಜೆ ವಯನಾಡ್ ಕಲ್ಪಟ್ಟ ಸಮೀಪ ನಡೆದಿದೆ.
ಕಾಸರಗೋಡು ವೆಳ್ಳರಿಕಂಡು ವಿನ ಸ್ನೇಹಾ ಜೋಸ್ (20), ಜಿಸ್ನಾ ಮೇರಿ ಜೋಸೆಫ್(20) ಮತ್ತು ಅಡೋನ್ ಬೆಸ್ಟಿ (20) ಮೃತರು.ಘಟನೆಯಲ್ಲಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಇವರು ಕಣ್ಣೂರು ಅಂಗಾಡಿ ಕಡವು ಡೋನ್ ಬೋಸ್ಕೊ ಕಾಲೇಜಿನ ಪದವಿ ವಿದ್ಯಾರ್ಥಿಗಳಾಗಿದ್ದರು.
ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದಿತ್ಯವಾರ ಸಂಜೆ ಮಲಯಾಟೂರಿಗೆ ತೆರಳಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ.
ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದು ಅಪಘಾತ ನಡೆದಿದೆ.ಕಾಸರಗೋಡು ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿದೆ.