ಕಾಸರಗೋಡು; ಪಂಚಾಯತ್ ಸದಸ್ಯೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಪಂಚಾಯತ್ ಸದಸ್ಯೆಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೊಗ್ರಾಲ್ ಪುತ್ತೂರು ಸಮೀಪ ನಡೆದಿದೆ.

ಮೊಗ್ರಾಲ್ ಪುತ್ತೂರು ಪಂಚಾಯತ್ ಮೂರನೇ ವಾರ್ಡ್ ಸದಸ್ಯೆ ಪುಷ್ಪಾ (45)ಮೃತಪಟ್ಟವರು.

ಸೋಮವಾರ ಮಧ್ಯಾಹ್ನ ಪರಿಸರ ಪುಷ್ಪಾ ಬಿದ್ದುಕೊಂಡಿರುವುದನ್ನು ಸ್ಥಳೀಯ ನಿವಾಸಿಯೋರ್ವರು ಗಮನಿಸಿದ್ದು, ಕೂಡಲೇ ಸ್ಥಳೀಯರ ನೆರವಿನಿಂದ ಆಟೋ ರಿಕ್ಷಾ ವೊಂದರಲ್ಲಿ ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆದರೆ ಅವರು ಮೃತಪಟ್ಟಿದ್ದರು.

ಪುಷ್ಪಾ ಅವರು ಸಂಬಂಧಿಕರ ಮನೆಗೆಂದು ತೆರಳಿದ್ದರು ಎನ್ನಲಾಗಿದೆ.ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್