ಕಾಸರಗೋಡು;ಎಸ್ ಬಿಐ ಬ್ಯಾಂಕ್ ಮ್ಯಾನೇಜರ್, ಪತಿ ಮಕ್ಕಳ ಜೊತೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು;ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಕಾಸರಗೋಡು ಶಾಖೆಯ ಮ್ಯಾನೇಜರ್‌, ಅವರ ಪತಿ ಮತ್ತು ಇಬ್ಬರು ಮಕ್ಕಳ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಎಸ್‌ಬಿಐಯ ಕಾಸರಗೋಡು ಶಾಖೆಯ ಮ್ಯಾನೇಜರ್‌ ಶೀನಾ(35), ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್‌ ಮೇಲೋಕಾಟಿಲ್‌ ಪರಂಬಿಲ್‌ ಸಬೀಶ್‌ (37), ಮಕ್ಕಳಾದ ಹರಿಗೋವಿಂದ್‌(6) ಮತ್ತು ಶ್ರೀವರ್ಧನ್‌(2) ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಬೀಶ್‌ ಮನೆಯ ಒಂದು ಕೊಠಡಿಯೊಳಗೆ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಬೀಶ್‌ ನೇಣು ಬಿಗಿದ ಕೊಠಡಿಯ ಹಾಸಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಕೆಳಗೆ ನೆಲದಲ್ಲಿ ಪತ್ತೆಯಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ