ಕಾಸರಗೋಡು; ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ದುರ್ಮರಣ

ಕಾಸರಗೋಡು:ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ನೀಲೇಶ್ವರ ಬಂಗಳ ಎಂಬಲ್ಲಿ ನಡೆದಿದೆ.

ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಮೃತ ಬಾಲಕ.

ನಿನ್ನೆ ಸಂಜೆ ಸೆಬಾಸ್ಟಿಯನ್ ಗೆಳೆಯರ ಜೊತೆ ಮನೆ ಸಮೀಪದ ಹೊಂಡದಲ್ಲಿ ಸ್ನಾನ ಕ್ಕಿಳಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ.

ನೀರಿನಲ್ಲಿ ಮುಳುಗಿದ್ದ ಬಾಲಕನಿಗೆ ಬೆಳಿಗ್ಗೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಮುಳುಗು ತಜ್ಞರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು.

ಟಾಪ್ ನ್ಯೂಸ್