ಕಣ್ಣೂರು: ಬೈಕ್ ಹಾಗೂ ಮಿನಿ ಲಾರಿ ಢಿಕ್ಕಿ, ಇಬ್ಬರು ಯುವಕರು ಮೃತ್ಯು

-ಮುನಾಫ್ ಮತ್ತು ಲತೀಫ್ ಮೃತರು.

ಕಾಸರಗೋಡು:ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಕಣ್ಣೂರು ಬಳಿ ನಡೆದಿದೆ.

ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್ (24) ಮತ್ತು ಸ್ನೇಹಿತ ಲತೀಫ್ (23) ಮೃತರು.

ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಗೆ ಕಣ್ಣೂರು ಎ.ಕೆ.ಜಿ. ಆಸ್ಪತ್ರೆ ಮುಂಭಾಗ ಮಂಗಳೂರಿನಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಮಿನಿ ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೆನ್ಲಾಕ್ ಜಿಲ್ಲಾಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ

ಮಂಗಳೂರು;ಅನಾರೋಗ್ಯದ ಕಾರಣ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ಪೊಲೀಸರು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಸಜಿಪ ನಡು ನಿವಾಸಿ ನೌಫಲ್(32) ಬಂಧಿತ ಆರೋಪಿ.

ಡ್ರಗ್ಸ್ ಪ್ರಕರಣಕ್ಕೆ ಧರ್ಮಸ್ಥಳ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಈತ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ.

ಅನಾರೋಗ್ಯದ ಕಾರಣ ಈತನನ್ನು ಚಿಕಿತ್ಸೆಗಾಗಿ ಪೊಲೀಸ್ ಭದ್ರತೆಯಲ್ಲಿ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಈತ ಆ.16ರಂದು ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ.ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು