ಕಾಲೇಜು ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

ರಶೀದ್( 15) ಮೃತ ಬಾಲಕ.

ಕಾಸರಗೋಡು;ಕಾಲೇಜು ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಾಸರಗೋಡು ರಶೀದ್( 15) ಮೃತ ಬಾಲಕ. ರಶೀದ್ ಉದುಮ ಪಾಕ್ಯಾರ ಮಜೀದ್ ಎಂಬವರ ಪುತ್ರನಾಗಿದ್ದಾರೆ.

ಪಾಲಕುನ್ನು ಕಪ್ಪಿಲಂ ಕೋಡಿಕಡಪ್ಪುರಂ ಬಳಿ ಸ್ನಾನಕ್ಕೆ ಇಳಿದಾಗ ನೀರಿಲ್ಲಿ ಮುಳುಗಿ ಈ ಅವಘಡ ಸಂಭವಿಸಿದೆ.ಮಾಹಿತಿ ತಿಳಿದ ಸ್ಥಳೀಯರು ಮತ್ತು ಪೊಲೀಸರು ರಶೀದ್ ನ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹದ ಹಸ್ತಾಂತರ ಕಾರ್ಯ ನಡೆದಿದೆ.

ಉಳ್ಳಾಲ;ಸಮುದ್ರದಲ್ಲಿ ಹೆಚ್ಚಿದ ಅಲೆಗಳ ಅಬ್ಬರ

ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಾಮಾರುತ ಹಿನ್ನೆಲೆಯಲ್ಲಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ಹೆಚ್ಚಾಗಿದೆ.

ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾಡ್ಸ್೯ ವಾಪಸ್ಸು ಕಳುಹಿಸುತ್ತಿದ್ದಾರೆ‌.

ಉಳ್ಳಾಲದಲ್ಲಿ ಬೃಹತ್ ಗಾತ್ರದ ಅಲೆಗಳು ಸಮುದ್ರದ ಅಂಚಿಗೆ, ಬಂಡೆಕಲ್ಲುಗಳಿಗೆ ಬಹುವೇಗಗಳಲ್ಲಿ ಅಪ್ಪಳಿಸುತ್ತಿದೆ. ಉಳ್ಳಾಲದ ಕೋಟೆಪುರ, ಕೋಡಿ, ಮೊಗವೀರಪಟ್ನ, ಕೈಕೋ, ಹಿಲೆರಿಯಾನಗರ, ಸುಭಾಷನಗರ, ಕೈಕೊ, ಸಮ್ಮರ್ ಸ್ಯಾಂಡ್, ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಸಮುದ್ರ ತೀರದ ಜನರಿಗೆ ಸ್ಥಳೀಯಾಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಠಾಣಾ ಪೊಲೀಸರು, ಹೋಂಗಾಡ್ಸ್೯ ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಸಮುದ್ರ ತೀರಕ್ಕೆ ಬರುವ ಪ್ರವಾಸಿಗರನ್ನು ವಾಪಸ್ಸು ಕಳುಹಿಸುತ್ತಿದ್ದಾರೆ.

ಟಾಪ್ ನ್ಯೂಸ್