ಕಾಸರಗೋಡು; ಆಟವಾಡಲು ತೆರಳಿದ್ದ ಶಾಲಾ ಬಾಲಕ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ, ಸಂಶಯ ಹುಟ್ಟು ಹಾಕಿದ ಪ್ರಕರಣ..

ಕಾಸರಗೋಡು:ಶಾಲಾ ವಿದ್ಯಾರ್ಥಿಯೋರ್ವ ಶಾಲಾ ಸಮೀಪ
ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಬೇಡಡ್ಕ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುಂಡಂಗುಳಿ ನಿವಾಸಿ ವಿನೋದ್ ಮತ್ತು ಶಾಲಿನಿ ದಂಪತಿಯ ಪುತ್ರ ಅಭಿನವ್ (17)ಮೃತ ಬಾಲಕ.

ಮಾ‌.7ರಂದು ಅಭಿನವ್ ಶಾಲೆಯಿಂದ ಮನೆಗೆ ಬಂದು ಸಂಜೆ ಆಟವಾಡಲು ಹೋಗುವುದಾಗಿ ಹೇಳಿ ಹೋಗಿದ್ದ.ಆ ಬಳಿಕ ಮನೆಗೆ ಬಂದಿಲ್ಲ.ಸಂಜೆಯಾದರೂ ವಾಪಸ್‌ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ.

ರಾತ್ರಿ 8 ಗಂಟೆ ಸುಮಾರಿಗೆ ಮನೆ ಸಮೀಪದ ಶಾಲೆಯ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ.

ಬಾಲಕನ ಸಾವಿನ ಬಗ್ಗೆ ಆಘಾತಗೊಂಡು ಕುಟುಂಬ ಸಂಶಯವನ್ನು ವ್ಯಕ್ತಪಡಿಸಿದೆ.ಈ ಕುರಿತು ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com