ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಹರಿದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ಹಳೆ ಬಸ್ ನಿಲ್ದಾಣ ಬಳಿ ನಡೆದಿದೆ.
ಮೊಗ್ರಾಲ್ ಪುತ್ತೂರು ನಿವಾಸಿ ಫಾಸಿಲ್ ತಬ್ಸೀರ್ (23) ಮೃತ ಯುವಕ.
ತಬ್ಸೀರ್ ಸ್ಕೂಟರ್ ನಲ್ಲಿ ತೆರಳುವಾಗ ಮುಂದಿನಿಂದ ಸಂಚರಿಸುತ್ತಿದ್ದ ವಾಹನವೊಂದು ದಿಡೀರ್ ಬ್ರೇಕ್ ಹಾಕಿದಾಗ ಸ್ಕೂಟರ್ ನಿಂದ ತಬ್ಸೀರ್ ರಸ್ತೆಗೆಸೆಯಲ್ಪಟ್ಟಿದ್ದಾರೆ.ಈ ವೇಳೆ ತಬ್ಸೀರ್ ನ ಮೇಲೆ ಕೆಎಸ್ಸಾರ್ಟಿಸಿ ಬಸ್ಸಿನ ಚಕ್ರ ಹರಿದಿದ್ದು, ಸ್ಥಳದಲ್ಲೆ ಮೃತಪಟ್ಟಿದ್ದರು.
ಈ ಕುರಿತು ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.