ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 14 ನೇ ಬಜೆಟ್ ಮಂಡಿಸಿದ್ದು , ಈ ಬಾರಿ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂ ಗಾತ್ರದ್ದಾಗಿದೆ
ಇದರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿಯೇ 7 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ.
3.27 ಲಕ್ಷ ಕೋಟಿ ರೂ ಬಜೆಟ್‌ನಲ್ಲಿ ಸಾಲ ಮರುಪಾವತಿಗೆ 22,441 ಕೋಟಿ ರೂ ವ್ಯಯವಾಗಲಿದೆ .
ಇನ್ನು ಬಂಡವಾಳ ಹೂಡಿಕೆಗಳಿಗೆ 54,374 ಕೋಟಿ ರೂ ವೆಚ್ಚ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಆದಾಯ ಹೆಚ್ಚಿಸಲು ಸರ್ಕಾರ ನಿರೀಕ್ಷೆಯಂತೆ ಅಬಕಾರಿ ಸುಂಕವನ್ನು ಶೇ.20ರಷ್ಟು ಹೆಚ್ಚಿಸಿದೆ. ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡ ಸಿದ್ದರಾಮಯ್ಯ, ಈ ಗ್ಯಾರಂಟಿ ಯೋಜನೆಗಳು ಬಿಟ್ಟಿ ಯೋಜನೆಗಳಲ್ಲ ಎಂದು ಹೇಳುತ್ತಾ ಬಿಆರ್ ಅಂಬೇಡ್ಕರ್ ಮಾತುಗಳನ್ನು ಉಲ್ಲೇಖಿಸಿದರು.
ಐದು ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ ವ್ಯಯವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರದಿಂದ ತೆರಿಗೆ ಪಾಲಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ದೂರಿದ್ದಾರೆ. ಕರ್ನಾಟಕ ಹೆಚ್ಚು ತೆರಿಗೆ ಸಂಗ್ರಹಿಸಿದರೂ ಶೇ. 3.65ರಷ್ಟು ಮಾತ್ರ ತೆರಿಗೆ ಪಾಲು ಸಿಗುತ್ತಿದೆ. ಕೇಂದ್ರದಿಂದ ರಾಜ್ಯಕ್ಕೆ ದ್ರೋಹ ಬಗೆಯಲಾಗಿದೆ ಎಂದು ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.
ಆಯವ್ಯಯ ಮಂಡನೆ ವೇಳೆ ಸಿದ್ದರಾಮಯ್ಯ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾಮಾಜಿಕ ಸೇವೆ, ಮೂಲಸೌಕರ್ಯ ಒದಗಿಸುವುದು, ಸಮಾಜದ ದುರ್ಬಲ ವರ್ಗಗಳ ಕಲ್ಯಾಣ, ಪರಿಸರ ಸಂರಕ್ಷಣೆ, ಆರ್ಥಿಕ ಅಭಿವೃದ್ಧಿಗೆ ಉತ್ತೇಜನ, ರೈತರ ಏಳಿಗೆ, ಸಂಪನ್ಮೂಲಗಳ ನ್ಯಾಯಯುತ ಹಂಚಿಕೆ ಮತ್ತು ಸಮಾನ ಅವಕಾಶಗಳ ಸೃಜನೆ ಮಾಡುವುದು ನಮ್ಮ ಆದ್ಯತೆಯಾಗಿರುತ್ತದೆ ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಾಜಿ ದೇವದಾಸಿಯರು, ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮೀ ಯೋಜನೆಯ 2,000 ರೂಪಾಯಿ
3 ಇಲಾಖೆಗಳಿಂದ 1,62,000 ಕೋಟಿ ತೆರಿಗೆ ಹಣ ಸಂಗ್ರಹದ ಗುರಿ
ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಡಯಾಲಿಸ್ ಕೇಂದ್ರ ಸ್ಥಾಪನೆ. ಒಟ್ಟು 219 ಡಯಾಲಿಸಿಸ್ ಸೆಂಟರ್ ನಿರ್ಮಾಣಕ್ಕೆ ನಿರ್ಧಾರ.
10 ನೇ ತರಗತಿವರೆಗೆ ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ಮೊಟ್ಟೆ ಭಾಗ್ಯ
ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದ್ದು, 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲಿಡಲಾಗಿದೆ.
ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬಳಿ ಸಂಚಾರ ದಟ್ಟಣೆ ಕಡಿಮೆ ಮಾಡಲು 240 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ಸೇತುವೆ
70 ಕೋಟಿ ರೂಪಾಯಿ ವೆಚ್ಚದಲ್ಲಿ ಕಲಬುರಗಿಯಲ್ಲಿ ತಾಯಿ-ಮಗು, ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು, ಕೊಪ್ಪಳ, ಕಾರವಾರ ಕೊಡಗು ಜಿಲ್ಲಾ ಆಸ್ಪತ್ರೆ ಉನ್ನತೀಕರಣ, ಮೈಸೂರು, ಕಲಬುರಗಿ ಬೆಳಗಾವಿಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ನೀಡುವ ಯೋಜನೆ, ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಕ್ರಮ; 100 ಹಬ್ ಗಳಿಗೆ 50 ಕೋಟಿ ರೂಪಾಯಿ
ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ
ಬ್ರ್ಯಾಂಡ್ ಬೆಂಗಳೂರಿಗೆ 45000 ಕೋಟಿ ರೂಪಾಯಿ ಅನುದಾನ, ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ನಗರೋತ್ಥಾನ ಯೋಜನೆಗಳ ಘೋಷಣೆ
5 ಗ್ಯಾರೆಂಟಿ ಯೋಜನೆಗೆ 52,000 ಕೋಟಿ ರೂಪಾಯಿ
ಇಂದಿರಾ ಕ್ಯಾಂಟಿನ್ ಗೆ 100 ಕೋಟಿ ರೂಪಾಯಿ
ಲೋಕೋಪಯೋಗಿ ಇಲಾಖೆಗೆ 10,143 ಕೋಟಿ ರೂಪಾಯಿ ಅನುದಾನ
ಆಹಾರ ಇಲಾಖೆಗೆ 10, 406 ಕೋಟಿ ರೂಪಾಯಿ
ಅನುಗ್ರಹ ಯೋಜನೆ’ ಮರು ಜಾರಿ-ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ರೈತ ಉತ್ಪನ್ನಗಳ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆಗೆ 10 ಕೋಟಿ ರೂ. ಮೀಸಲಿಡಲಾಗಿದೆ.
ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ: 75 ಕೋಟಿ ರೂ. ಅನುದಾನ ನೀಡಲಾಗಿದೆ. ಕಾಫಿ ಟೂರಿಸಂ, ವೀಳ್ಯದೆಲೆ, ಮೈಸೂರು ಮಲ್ಲಿಗೆಗೆ ಬ್ರಾಂಡಿಂಗ್ ಮಾಡುವುದಕ್ಕೆ ವಿಶೇಷ ಪಣ ತೊಟ್ಟಿದೆ ‘ಕೃಷಿ ಭಾಗ್ಯ ಯೋಜನೆ’ಗೆ ನರೇಗಾ ಅಡಿಯಲ್ಲಿ 100 ಕೋಟಿ ರೂಪಾಯಿ ನೀಡುವುದಾಗಿ ಸಿಎಂ ಹೇಳಿದರು.
ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ರೇಷ್ಮೆ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು.
ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ.
ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ
ಕೃಷಿ ಉತ್ಪನ್ನ ಮಾರುಕಟ್ಟೆಗಳು, ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ ಒದಗಿಸಿ, ಅವರ ಹಿತ ಕಾಯುವ ಸಂಸ್ಥೆಗಳಾಗಬೇಕು ಎಂಬ ಆಶಯದಂತೆ ಹಿಂದಿನ ಅವಧಿಯಲ್ಲಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಬಲಪಡಿಸಿ, ಆನ್‌ಲೈನ್ ಮಾರುಕಟ್ಟೆ ವ್ಯವಸ್ಥೆಯನ್ನು ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಲಾಯಿತು. ರೈತರ ಹಿತರಕ್ಷಣೆ ಮಾಡಲು ನಮ್ಮ ಸರ್ಕಾರವು ಸದರಿ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿದೆ.
ʻಕಾಯಕ ನಿಧಿʼ ಯೋಜನೆಯಡಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರು ಮರಣ ಹೊಂದಿದಲ್ಲಿ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು 10,000 ರೂ. ಗಳಿಂದ 25,000 ರೂ. ಗಳಿಗೆ ಹೆಚ್ಚಿಸಲಾಗುವುದು.
ಸ್ವಿಗ್ಗಿ, ಅಮೆಜಾನ್ ನಂತಹ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ 4 ಲಕ್ಷ ರೂ. ಜೀವ ಮತ್ತು ಅಪಘಾತ ವಿಮೆ!
ವಾರದಲ್ಲಿ ಎರಡು ದಿನ ಮೊಟ್ಟೆ, ಇಲ್ಲವೇ ಚಿಕ್ಕಿ, ಇಲ್ಲವೇ ಬಾಳೆ ಹಣ್ಣು ಅನ್ನು ಸರ್ಕಾರಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ನೀಡಲಾಗುವುದು ಎಂದು ಸಿಎಂ ತಿಳಿಸಿದರು. .
ಕೇಂದ್ರ ಸರ್ಕಾರದ NEPಗೆ ಅವರು ವಿರೋಧ ವ್ಯಕ್ತ ಪಡಿಸಿದ್ದು, ರಾಜ್ಯ ಸರ್ಕಾರದಿಂದ ಹೊಸ ಶಿಕ್ಷಣ ವ್ಯವಸ್ಥೆ ಜಾರಿ ಮಾಡಲಾಗುವುದು ಅಂತ ತಿಳಿಸಿದರು.
ಇನ್ಮುಂದೆ ರಿಜಿಸ್ಟರ್ ಮ್ಯಾರೇಜ್ ಆಗುವವರು ತಮ್ಮ ಗ್ರಾಮ ಪಂಚಾತಿಗಳಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಈ ಮೊದಲು ವಿವಾಹ ನೋಂದಣಿಗಾಗಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಅಲೆಯಬೇಕಿತ್ತು. ಇದೀಗ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಚಾಯಿತಿಗಳಲ್ಲಿ ವಿವಾಹ ನೋಂದಣಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.
ಕ್ಷಯ ರೋಗ ಪತ್ತೆಗೆ ಕೈಚಾಲಿತ-ಕ್ಷ-ಕಿರಣ (Hand Held X-Ray) ಉಪಕರಣ ಒದಗಿಸಲು 3 ಕೋಟಿ ರೂ. ಅನುದಾನ.
ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ, ಮನೆಬಾಗಿಲಿಗೆ ಔಷಧ ವಿತರಣೆ-ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಜಾರಿ.
ಆಶಾಕಿರಣ ಕಾರ್ಯಕ್ರಮದಡಿ ರಾಜ್ಯದ 4 ಜಿಲ್ಲೆಗಳಲ್ಲಿ ನೇತ್ರ ಚಿಕಿತ್ಸೆ-21 ಕೋಟಿ ರೂ. ಅನುದಾನ.
ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಮತ್ತು
ಎಂ.ಆರ್.ಐ. ಸ್ಕ್ಯಾನಿಂಗ್ ಸೌಲಭ್ಯ ವಿಸ್ತರಣೆಗೆ ಕ್ರಮ.
ಕರ್ನಾಟಕ ರತ್ನ ಡಾ|| ಪುನೀತ್ ರಾಜ್‌ಕುಮಾರ್ ರವರ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲು ಕ್ರಮ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು 24 ಲಕ್ಷ ವಿದ್ಯಾರ್ಥಿಗಳಿಗೆ 881 ಕೋಟಿ ರೂ.ಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಕಾಂಗ್ರೆಸ್ ಅವಧಿಯಲ್ಲಿ ಮಂಜೂರು ಮಾಡಿತ್ತು. ಆದರೆ ಬಿಜೆಪಿ ಸರ್ಕಾರವು 2020-21, 2021-22 ಮತ್ತು 2022-23ನೇ ಸಾಲಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸದೇ ನಿರ್ಲಕ್ಷಿಸಿತು. ಇದೀಗ ಕಾರ್ಯಕ್ರಮ ಪುನರ್ ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯದ GSDP ಶೇ.17ಕ್ಕೆ ಹೆಚ್ಚಿಸಲು ಗುರಿ
ರಾಜ್ಯದ GSDP ಬೆಳವಣಿಗೆ ದರವನ್ನು ಶೇ.13 ರಿಂದ ಶೇ.17ಕ್ಕೆ ಹೆಚ್ಚಿಸುವ ಮೂಲಕ ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಎಕಾನಮಿಯಾಗಿ ಏರಿಸುವ ಗುರಿ ಹೊಂದಲಾಗಿದೆ. ಇದರೊಂದಿಗೆ ಕೃಷಿ, ಉದ್ಯಮ ಮತ್ತು ಸೇವಾ ವಲಯಗಳ ಸಾಮರ್ಥ್ಯ ವೃದ್ಧಿ, ಮೂಲಸೌಕರ್ಯ ಬೆಂಬಲ, ಅಧಿಕಾರ ಪ್ರತ್ಯಾಯೋಜನೆ, ಆಡಳಿತ ವಿಕೇಂದ್ರೀಕರಣ ಮತ್ತಿತರ ಉಪಕ್ರಮ ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹಸಿವು ಮುಕ್ತ ಕರ್ನಾಟಕಕ್ಕೆ ಸರ್ಕಾರದ ಪಣ
ಎಲ್ಲಾ ಅರ್ಹ ಫಲಾನುಭವಿಗಳಿಗೆ 5 ಕೆ.ಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆ
ಆಹಾರಧಾನ್ಯ ಲಭ್ಯವಾಗುವ ವರೆಗೆ ಪ್ರತಿ ಫಲಾನುಭವಿಗೆ 170 ರೂ. ನಂತೆ ಡಿಬಿಟಿ ಮೂಲಕ ನಗದು ವರ್ಗಾವಣೆ
ಅಂದಾಜು 4.42 ಕೋಟಿ ಫಲಾನುಭವಿಗಳಿಗೆ ಅನುಕೂಲ
ಈ ಯೋಜನೆಗೆ 10,275 ಕೋಟಿ ರೂ. ಅನುದಾನ…
ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಅನುಗ್ರಹ ಯೋಜನೆ ಮರು ಜಾರಿ ಮಾಡುವುದಾಗಿ ತಿಳಿಸಿದ್ದಾರೆ. ಕುರಿಗಳು ಆಕಸ್ಮಿಕವಾಗಿ ಮೃತಪಟ್ಟರೆ 5 ಸಾವಿರ, ಕುರಿ ಮರಿಗೆ 2500 ರೂ. ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದರು.
ದೇಶದಲ್ಲೇ ಮೊದಲ ಬಾರಿಗೆ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆ ಮಾಡಲಿದ್ದೇವೆ. 70 ಕೋಟಿ ರೂ.ನಲ್ಲಿ ಕಲಬುರಗಿಯಲ್ಲಿ ತಾಯಿ ಮಗು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾಸ್ಪತ್ರೆಗಳ ಉನ್ನತೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕ್ರಮ ಕೈಗೊಳ್ಳಲಿದ್ದೇವೆ ಎಂದು ಸಿಎಂ ಘೋಷಿಸಿದರು.
ಕರ್ನಾಟಕದ ಆಹಾರ ಇಲಾಖೆಗೆ 10460 ಕೋಟಿ ರೂ. ಅನುದಾನ ಒದಗಿಸಲಿದ್ದೇವೆ. ಶಾಲಾ ಕಾಲೇಜುಗಳಲ್ಲಿ ಹೊಸ ಶೌಚಾಲಯ ನಿರ್ಮಿಸಲು ಚಿಂತನೆ ಇದ್ದು, ಅದಕ್ಕಾಗಿ 200 ಕೋಟಿ ರೂಪಾಯಿ ಮೀಸಲಿಡಲಾಗುವುದು.
ರಾಜ್ಯದಲ್ಲಿ ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಮುಂದಾಗಿದೆ. 172 ಯೋಜನೆಗಳ ಮೂಲಕ 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ನೀಡಲಾಗುವುದು. ಉತ್ತರ ಕರ್ನಾಟಕದ ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ಸರ್ಕಾರ ನಿರ್ಧರಿಸಿದೆ.
ಹಠಾತ್ ಹೃದಯಾಘಾತ ಸಾವು ತಡೆಯಲು ಸರ್ಕಾರ ಕ್ರಮಕೈಗೊಳ್ಳಲಿದೆ. ದಿ.ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಜಿಲ್ಲಾ-ತಾಲೂಕು ಆಸ್ಪತ್ರೆಗಳಲ್ಲಿ 06 ಕೊಟಿ ವೆಚ್ಚದಲ್ಲಿ AED ಚಿಕಿತ್ಸಾ ಯಂತ್ರ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ಧಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ ಆರು ತಿಂಗಳುಗಳಿಗೆ ನೀಡಲಾಗುತ್ತಿದೆ. ಇದನ್ನು 12 ತಿಂಗಳಿಗೆ ವಿಸ್ತರಿಸಲಾಗುವುದು. ಇದಕ್ಕೆ ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಒದಗಿಸಲಿದೆ.
ಸಮಾಜದ ಸ್ವಾಸ್ಥ್ಯ ಕಾಪಾಡುವ ಆಶಯದಿಂದ ಪಠ್ಯಪುಸ್ತಕ ಮರುಪರಿಷ್ಕರಣೆಗೆ ಕ್ರಮ.
ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಿಕತೆಯನ್ನು ಆಧರಿಸಿ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ.