ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಮೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಣಿಕಂಠ ಅವರು ಪಡುಬಿದ್ರಿ ಕಡೆಯಿಂದ ಕಾಪು ಕಡೆಗೆ ತೆರಳುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿದ್ದ ಮಣಿಕಂಠ ಅವರನ್ನು ಗಮನಿಸಿದ ಮಿಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಉಚ್ಚಿಲದ ಯುವಕರು, ಕೂಡಲೇ ಅವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕರ ಮಾನವೀಯ ಕಾರ್ಯಕ್ಕೆ ಇದೀಗ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.