ಕಾಪು;ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ, ಓರ್ವನ ಕೊಲೆ

ಕಾಪು;ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉದ್ಯಾವರದ ಬಳಿ ನಡೆದಿದೆ.

ಪಿತ್ರೋಡಿ ನಿವಾಸಿ ದಯಾನಂದ (40) ಮೃತರು ಎಂದು ಗುರುತಿಸಲಾಗಿದೆ.

ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ ಕುಡಿದ ನಶೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ
ಭರತ್ ಮತ್ತು ದಯಾನಂದ ಎಂಬವರ ನಡುವೆ ಗಲಾಟೆಯಾಗಿದೆ.ಬಳಿಕ ಬಾರ್ ನಿಂದ ಹೊರಗಡೆ ಬಂದು
ಭರತ್ ತನ್ನ ಕೈ ಬೆರಳಿನಲ್ಲಿ ಇದ್ದ ಕಬ್ಬಿಣದ ಪಂಚ್ ನಿಂದ ದಯಾನಂದ ಅವರ ಮುಖ ಹಾಗೂ ಕೆನ್ನೆಯ ಭಾಗಕ್ಕೆ ಬಲವಾಗಿ ಜಜ್ಜಿ ಬಳಿಕ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ.

ತೀವ್ರವಾಗಿ ಗಾಯಗೊಂಡ ದಯಾನಂದನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

ಹಲ್ಲೆ ನಡೆಸಿದ ಭರತ್ ಘಟನೆಯ ಅನಂತರ ಸ್ಥಳದಿಂದ ಪರಾರಿಯಾಗಿದ್ದ.ಬಳಿಕ ಸ್ಥಳೀಯರ ಸಹಕಾರದಿಂದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಉಡುಪಿ ಎಸ್‌ ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಕಾಪು ಡಿವೈಎಸ್‌ ಪಿ ಅರವಿಂದ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆಸಿ ಪೂವಯ್ಯ ಸೇರಿ ಪೊಲೀಸರು ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com