ಕಾಪು; ಅಡ್ಡಾದಿಡ್ಡಿಯಾಗಿ ವಾಹನ ಚಾಲನೆ, ನಾಲ್ವರು ಪೊಲೀಸ್ ವಶಕ್ಕೆ

ಕಾಪು;ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಡ್ಡಾದಿಡ್ಡಿಯಾಗಿ‌ ವಾಹನ ಚಲಾಯಿಸಿ ಸಾರ್ವಜನಿಕ ಸಂಚಾರಕ್ಕೆ ತೊಡಕು ಉಂಟು ಮಾಡಿದ ನಾಲ್ವರನ್ನು‌ ಕಾರು ಸಮೇತ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗುಡ್ಡೆಯಂಗಡಿ ಉದ್ಯಾವರ ಗ್ರಾಮ ಅಯಾನ್ (24), ಕುಂಜಿಬೆಟ್ಟು ಮಿಶಾಲ್ವುದ್ದೀನ್ (23) ಉಡುಪಿಯ ಹೈಕ ಬಿಲ್ಡಿಂಗ್ ಶಾನೂನ್ ಡಿಸೋಜಾ (25), ಕೊಡಂತೂರು 10ನೇ ಕ್ರಾಸ್ ವಿವೇಕ್ (23) ಎಂಬ ನಾಲ್ವರ ವಿರುದ್ದ ಕೇಸು ದಾಖಲಾಗಿದೆ.

ಮೇ.23ರಂದು ಕಾಫು ಠಾಣಾ ಪಿಎಸ್‌ಐ ಸುಮಾ ಇವರಿಗೆ ಓರ್ವರು ಕರೆಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ರಾ.ಹೆ 66 ರಸ್ತೆಯಲ್ಲಿ 1 ಜೀಪು ಹಾಗೂ 3 ಕಾರುಗಳನ್ನು ಅದರ ಚಾಲಕರುಗಳು ಅತೀ ವೇಗ ಮತ್ತು ತೀವ್ರ ಅಜಾಗರೂಕತೆಯಿಂದ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ವಿಡಿಯೋ ವೈರಲ್‌ ಆಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು.

ಈ ಬಗ್ಗೆ ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸಿ
KA 20 MD 6767 ನೇ ನೀಲಿ ಬಣ್ಣದ ಮಹೀಂದ್ರಾ ಜೀಪು, KA 20 MA 9370 ನೇ ಕಪ್ಪು ಬಣ್ಣದ CRETA ಕಾರು, KA 20 ME 6996 ನೇ ಬಿಳಿ ಬಣ್ಣದ ಫಾರ್ಚುನರ್‌ ಕಾರು, KA 20 MD 8078 ನೇ ಬಿಳಿ ಬಣ್ಣದ ಸ್ವಿಫ್ಟ್ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಠಾಣಾ ವ್ಯಾಪ್ತಿಯಲ್ಲಿ ಅತೀ ವೇಗ ಹಾಗೂ ತೀವ್ರ ಅಜಾಗರೂಕತೆಯಿಂದ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ವಾಹನಗಳನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವಾಹನಗಳ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿ ಬಂದಿತ್ತು ಎನ್ನಲಾಗಿದೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com