ಕಾಪು; ಇಬ್ಬರು ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ, ಓರ್ವನ ಕೊಲೆ

ಕಾಪು:ಕಟಪಾಡಿಯಲ್ಲಿ ಇಬ್ಬರು ಕಾರ್ಮಿಕರ ನಡುವಿನ ಗಲಾಟೆಯಾಗಿ ಓರ್ವನ ಕೊಲೆಯಲ್ಲಿ ಕೊನೆಗೊಂಡಿದೆ.

ಒರಿಸ್ಸಾ ಮೂಲದ ಗಣೇಶ್ (50) ಮೃತ ಕಾರ್ಮಿಕ.ಇವರು
ಕಟಪಾಡಿ ಶಿರ್ವ ರಸ್ತೆ ಬಳಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು.

ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರೂ ಹೊಡೆದಾಟ ನಡೆಸಿದ್ದರು. ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇನ್ನು ಹತ್ಯೆಗೆ ಕಾರಣನಾದ ಕಾರ್ಮಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.ಈ ಕುರಿತು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್