ಕಾಪು:ಬಸ್ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆಯಲ್ಲಿ ನಡೆದಿದೆ.
ಕಾಪು ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವರ್ಷಿತಾ(13) ಗಾಯಾಗೊಂಡ ವಿದ್ಯಾರ್ಥಿನಿ.
ಬಾಲಕಿ ಬೆಳಗ್ಗೆ ಶಾಲೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಬಾಲಕಿಗೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಬಾಲಕಿಯ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಕಾಪು ಪೊಲೀಸರು ಬಸ್ ನ್ನು ವಶಪಡಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.