ಕಾಪು: ಚೂರಿಯಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಪಾಂಗಾಳದಲ್ಲಿ ಸಂಜೆ ನಡೆದಿದೆ.
ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ(39) ಹತ್ಯೆಗೀಡಾದ ವ್ಯಕ್ತಿ.
ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿ ಅವರ ಮೇಲೆ ಚೂರಿಯಿಂದ ಇರಿಯಲಾಗಿದೆ
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಕಾಪು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.