ಕಾಪು;ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಜೂರು ಮಸೀದಿ ಬಳಿ ನಡೆದಿದೆ.
ಪುಷ್ಪಾ ಎಂಬ ಮಹಿಳೆ ಹಾಗೂ ಅವರ ಸಂಬಂಧಿ ಮೃತರು.
ಭಾರೀ ಗಾಳಿ ಮಳೆಗೆ ಬೃಹತ್ ಮರವೊಂದು ಕಾಪು ಕಡೆಯಿಂದ ಶಿರ್ವ ಕಡೆ ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದಿದೆ.
ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆಯಲ್ಲಿ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು, ರಿಕ್ಷಾ ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.