ಬಸ್ ಚಲಾಯಿಸಿಕೊಂಡು ಹೋದ ಕೆಜಿಎಫ್ ಶಾಸಕಿ ರೂಪಕಲಾ!

ಬಸ್ ಚಲಾಯಿಸಿಕೊಂಡು ಹೋದ ಕೆಜಿಎಫ್ ಶಾಸಕಿ ರೂಪಕಲಾ!

ಕೋಲಾರ;ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಗೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯಾದ್ಯಂತ ಚಾಲನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇಂದು ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಕ್ತಿ ಯೋಜನೆಯ ಲೋಗೋ ಹಾಗೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ನ್ನು ಬಿಡುಗಡೆ ಮೂಲಕ‌ ಯೋಜನೆಗೆ ಚಾಲನೆ ನೀಡಿದ್ದಾರೆ.ಬಳಿಕ ಐವರು ಮಹಿಳೆಯರಿಗೆ ಸಾಂಕೇತಿಕವಾಗಿ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ.

ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಆಯಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸ್ಥಳೀಯ ಶಾಸಕರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಕೋಲಾರದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡುವ ವೇಳೆ ಬಸ್‌ ಚಲಾಯಿಸಿ ಕೆಜಿಎಫ್‌ ಶಾಸಕಿ ರೂಪಕಲಾ ಶಶಿಧರ್ ಸುದ್ದಿಯಾಗಿದ್ದಾರೆ.

ಶಕ್ತಿ ಯೋಜನೆಗೆ ಶಾಸಕಿ ರೂಪಕಲಾ ಚಾಲನೆ ನೀಡಿದ ಬಳಿಕ ಬಸ್‌ ಚಲಾಯಿಸುವಂತೆ ಅಲ್ಲಿದ್ದ ಕಾರ್ಯಕರ್ತರು ಕೇಳಿಕೊಂಡಿದ್ದಾರೆ.ಈ ವೇಳೆ ಶಾಸಕಿ ಬಸ್ ಚಲಾಯಿಸಲು ಮುಂದಾಗಿದ್ದು, ಅವರಿಗೆ ಬಸ್‌ ಚಾಲಕ ಅಗತ್ಯ ಮಾರ್ಗರ್ಶನ ನೀಡಿದ್ದಾರೆ.

ಶಾಸಕಿ ರೂಪಕಲಾ ಬಸ್ ನಲ್ಲಿ ಡ್ರೈವರ್ ಕುಳಿತು ಕೊಳ್ಳುವ ಸ್ಥಳದಲ್ಲಿ ಕುಳಿತು ಸ್ವಲ್ಪ ದೂರ ಬಸ್ ಡ್ರೈವ್ ಮಾಡಿದ್ದಾರೆ‌.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ