ಮಂಗಳೂರು;ಮಂಗಳೂರಿನಲ್ಲಿ ನಡೆಯುತ್ತಿರುವ ಮೋದಿ ಕಾರ್ಯಕ್ರಮಕ್ಕೆ ಬಲವಂತವಾಗಿ ಜನರಿಗೆ ಆಹ್ವಾನ ಮಾಡಲಾಗುತ್ತಿದೆ ಎಂದು ಶಾಸಕ ಯುಟಿ ಖಾದರ್ ಟೀಕಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು,ಕಾರ್ಯಕ್ರಮ ನಡೆಯುವ ಮೈದಾನ ಸಾಕಾಗುತ್ತಾ ಇಲ್ವಾ ಎನ್ನುವ ಪ್ರಶ್ನೆ ಕಾಡತೊಡಗಿದೆ. ಮೈದಾನಕ್ಕಿಂತ ದೊಡ್ಡ ಜಾಗ ಬೇಕು ಅಂತಾ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.
ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು,ಜನರು ಸೇರುವ ನಿರೀಕ್ಷೆ ಕಂಡಾಗ ಈಗ ಇರುವ ಮೈದಾನಕ್ಕಿಂತ ದೊಡ್ಡ ಸ್ಥಳ ಬೇಕೆಂದು ಕಾಣಿಸುತ್ತಿದೆ.ಉಡುಪಿ ಹಾಗೂ ದ.ಕ.ಜಿಲ್ಲೆಯ ಎಲ್ಲಾ ಗ್ರಾ.ಪಂ.ಪಿಡಿಒಗಳಿಗೆ ನೋಟೀಸ್ ನೀಡಲಾಗಿದೆ. ಪ್ರತಿ ಗ್ರಾಮದಿಂದ 250 ಜನರನ್ನು ಕರೆತರಲು ಜಿಲ್ಲಾಡಳಿತ ನೊಟೀಸ್ ನೀಡಿದೆ ಎಂದು ಹೇಳಿದ್ದಾರೆ.
ಕಂದಾಯ ಇಲಾಖೆಯಿಂದ ವಿಎ ಸೇರಿದಂತೆ ಎಲ್ಲಾ ಅಧಿಕಾರಿಗಳು ಬರಬೇಕೆಂಬ ಸೂಚನೆ ನೀಡಲಾಗಿದೆ. ಗ್ರಾಪಂ ಕಾರ್ಯದರ್ಶಿ,ಲೈನ್ ಮ್ಯಾನ್,ನೀರು ಬಿಡುವವನಿಗೂ ಅಧಿಕಾರಿಗಳು ನೊಟೀಸ್ ನೀಡಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ನೀಡಿ ಎಲ್ಲಾ ಮಕ್ಕಳೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಚನೆ ನೀಡಿದ್ದಾರೆ.ಬ್ಯಾಂಕ್ ಗಳಿಗೂ ನೊಟೀಸ್ ನೀಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಹೇಳಿದ್ದಾರೆ.