ನವದೆಹಲಿ;ಬಿಜೆಪಿ ರಾಷ್ಟ್ರೀಯ ಮುಖಂಡರಾದ ಜೆಪಿ ನಡ್ಡಾ, ಅಮಿತ್ ಮಾಳವಿಯಾ, ಅರುಣ್ ಸೂದ್ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ಸಲ್ಲಿಸಿದೆ.
ಸಚಿವ ಪ್ರಿಯಾಂಕ್ ಖರ್ಗೆ, ರಮೇಶ್ ಬಾಬು ಸೂರ್ಯಮುಕುಂದ್ ರಾಜ್ ನೇತೃತ್ವದ ತಂಡ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೂನ್ 17ರಂದು ಬಿಜೆಪಿ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದೆ ಎಂಬಂತೆ ಬಿಂಬಿಸಲಾಗಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗೆಲೆಲ್ಲಾ ದೇಶ ಒಡೆಯೋ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ ಅಂತಾ ತೋರಿಸೋ ರೀತಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ರೀತಿ ಸುಳ್ಳು ಮಾಹಿತಿ ನೀಡುವ ಪೋಸ್ಟ್ ಗಳನ್ನು ಮಾಡುವ ಬಿಜೆಪಿ ಐಟಿ ಸೆಲ್ ಕರ್ನಾಟಕದಲ್ಲಿ ಬಂದ್ ಮಾಡಬೇಕು. ಅವರ ಸರ್ಕಾರ ಇದ್ದಾಗ ಇದೆಲ್ಲ ನಡಿತಿತ್ತು. ಈಗ ನಮ್ಮ ಸರ್ಕಾರ ಬಂದಿದ್ದು, ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ನಾವು ಸರ್ವಜನಾಂಗದ ಶಾಂತಿಯ ತೋಟ ಮಾಡೋಕೆ ಹೊರಟಿದ್ದೇವೆ ಎಂದು ಖರ್ಗೆ ವಾಗ್ಧಾಳಿ ನಡೆಸಿದ್ದಾರೆ.
ಈ ಹಿನ್ನೆಲೆ ಬಿಜೆಪಿ ನಾಯಕರ ವಿರುದ್ಧ ದೂರು ಕೊಟ್ಟು ಎಫ್‌ಐಆರ್ ಮಾಡಲು ಮನವಿ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.