ಕೊಡಗು; ಕೊಡಗಿನ ನಿವಾಸಿ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ಅವರ ಪುತ್ರ ಜಿತಿನ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.
ಜಿತಿನ್ ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಇದರಿಂದಾಗಿ ಜಿತಿನ್ ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಜಿತಿನ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಘಟನೆ ಕುರಿತು ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.