ಕೊಡಗು; 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿರವಳ್ಳಿ ಗ್ರಾಮದಲ್ಲಿ 7ನೇ ತರಗತಿಯ ವಿದ್ಯಾರ್ಥಿನಿ ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡವರು.ಜಿತೇಂದ್ರ ಅಕ್ಷತ ದಂಪತಿಯ ಪುತ್ರಿ ಅಕ್ಷತಾ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇಂದು ರಜಾ ದಿನವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಒಬ್ಬಳನ್ನೇ ಓದಿಕೊಳ್ಳುವಂತೆ ಬಿಟ್ಟು ಪಾಲಕರು ಹೊರಗೆ ಹೋಗಿದ್ದಾರೆ.ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿದ್ಯಾರ್ಥಿನಿ ಆತ್ಮಹತ್ಯೆ ಕುರಿತಂತೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.