ಎಸೆಸೆಲ್ಸಿ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ

ಕೋಲಾ;ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಮುಳಬಾಗಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ.

ಉದಯ್​ ಕುಮಾರ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪೋಷಕರು ಉದಯ್ ಗೆ ಬುದ್ದಿವಾದ ಹೇಳಿದ ಕಾರಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌‌.

ಉದಯ್ ವಾಂತಿ ಮಾಡಿಕೊಂಡ ವೇಳೆ ವಿಷ ಸೇವನೆ ಮಾಡಿರೋದು ಗೊತ್ತಾಗಿದೆ. ಕೂಡಲೇ ಪೋಷಕರು ಬಾಲಕನ್ನು ಸ್ಥಳೀಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಈ ಕುರಿತು ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್