ಸೆಕ್ಯೂಲರ್ ಫ್ರಂಟ್ ಕಾರ್ಯಕರ್ತರ ಪ್ರತಿಭಟನಾ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ, ಲಾಠೀ ಚಾರ್ಜ್

ಕೋಲ್ಕತ್ತಾ;ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರ ದಾಳಿ ಖಂಡಿಸಿ ಭಾರತೀಯ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಮತ್ತು ಕೋಲ್ಕತ್ತಾ ಪೊಲೀಸರ ನಡುವೆ ಸಂಘರ್ಷ ನಡೆದಿದೆ.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಐಎಸ್‌ಎಫ್ ಶಾಸಕ ನೌಶಾದ್ ಸಿದ್ದಿಕ್ ಅವರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಘಟನೆ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

ISF ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು.ಈ ವೇಳೆ ರಸ್ತೆ ತೆರವುಗೊಳಿಸಲು ಪೊಲೀಸರು ಸೂಚಿಸಿದ್ದಾರೆ.ಈ ವೇಳೆ ಘರ್ಷಣೆ ನಡೆದಿದೆ.

ಪ್ರತಿಭಟನಾಕಾರರು ಹಲವಾರು ಪೊಲೀಸ್ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.ಈ ವೇಳೆ ಪೊಲೀಸರು ಲಾಠೀ ಚಾರ್ಜ್ ನಡೆಸಿದ್ದಾರೆ.

ಟಾಪ್ ನ್ಯೂಸ್