ಕೋಟ; ಬೈಕ್ ಅಪಘಾತ, ಯುವಕ ಮೃತ್ಯು

ಕೋಟ: ಬೈಕ್‍ಗಳು ಮುಖಮುಖಿಯಾಗಿ ಡಿಕ್ಕಿ ಸಂಭವಿಸಿ ಓರ್ವ ಯುವಕ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೋಡಿ ಕನ್ಯಾಣ ಅಂಗನವಾಡಿ ಸಮೀಪ ನಡೆದಿದೆ.

ಮೃತಪಟ್ಟ ಯುವಕ ಪಾರಂಪಳ್ಳಿಯ ರವಿ ಪೂಜಾರಿ(30) ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಸ್ಥಳೀಯ ಚರಣ್ ಹಾಗೂ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಡಿ ಕನ್ಯಾಣದಿಂದ ಪಾರಂಪಳ್ಳಿಗೆ ಹೋಗುತ್ತಿದ್ದ ಎರಡು ಬೈಕ್‍ಗಳು ಪಾರಂಪಳ್ಳಿಯಿಂದ ಬರುತ್ತಿದ್ದ ಬೈಕ್‍ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನಲ್ಲೆಯಲ್ಲಿ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ಅಪಘಾತ ನಡೆದ ಸ್ಥಳದ ವಿರುದ್ದ ದಿಕ್ಕಿನಲ್ಲಿ ಯಾವುದೇ ಪಾರ್ಕಿಂಗ್ ಸಿಗ್ನಲ್ ಇಲ್ಲದೆ ರಸ್ತೆ ಬದಿಯಲ್ಲಿ ಕಾರೊಂದು ಪಾರ್ಕಿಂಗ್ ಮಾಡಿದ್ದು ಬೈಕ್ ಸವಾರರಿಗೆ ಮುಂದೆ ಬರುತ್ತಿದ್ದ ಬೈಕ್ ಕಾಣಿಸದೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್