ಕೋಟ; ಭೀಕರ ಅಪಘಾತ, ಓರ್ವ ಮೃತ್ಯು

ಕೋಟ:ಚಾಲಕನ ನಿಯಂತ್ರಣ ತಪ್ಪಿದ ಕಾರು ಸೈಕಲ್‌‌ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಸಾಲಿಗ್ರಾಮ ಡಿವೈನ್ ಪಾರ್ಕ್ ಎದುರುಗಡೆ ನಡೆದಿದೆ.

ಸೈಕಲ್ ಸವಾರ ಗುಂಡ್ಮಿ ಭಗವತಿ ರಸ್ತೆಯ ಕೇಶವ ಮರಕಾಲ (41) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಉಡುಪಿಯಿಂದ ಕುಂದಾಪುರ ಕಡೆಗೆ ವೇಗವಾಗಿ ಹೋಗುತ್ತಿದ್ದ ಸೈಕಲ್ ಚಾಲಕನ ನಿಯಂತ್ರಣ ತಪ್ಪಿ ಗುಂಡ್ಮಿಯಿಂದ ಸಾಲಿಗ್ರಾಮ ಕಡೆ ಹೋಗುತ್ತಿದ್ದ ಸೈಕಲ್ ಸವಾರನಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಕಾರು ಪಲ್ಟಿಯಾಗಿದೆ.

ಅಪಘಾತದಲ್ಲಿ ಸೈಕಲ್ ಸವಾರ ಕೇಶವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕಾರು ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com