ಉಡುಪಿ; ಪೋನ್ ನಲ್ಲಿ ಮಾತನಾಡುವಾಗ ಸಿಡಿಲು ಬಡಿದು ಯುವಕ ಮೃತ್ಯು

ಕೋಟ: ಪೋನ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.

ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ ಯುವಕ.

ಪ್ರಮೋದ್ ಸಿಡಿಲು ಬರುವಾಗ ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದರು.ಈ ವೇಳೆ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದರು.

ಬ್ರಹ್ಮಾವರಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ.

ಪ್ರಮೋದ್ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಟಾಪ್ ನ್ಯೂಸ್