ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.

ಇದರ ಜೊತೆಗೆ ವಿಧಾನಪರಿಷತ್ ವಿಪಕ್ಷ ಉಪನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಲಾಗಿದೆ, ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್,ಹಾಗೆಯೇ ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ಟಾಪ್ ನ್ಯೂಸ್