ಹಾಸನ:ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾಗಳನ್ನು ಬಂದ್ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಳಗಾವಿಯಲ್ಲಿ ಹೇಳಿಕೆ ಕೊಟ್ಟಿದ್ದರು.ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಮಾಜಿ ಸಿಎಂ ಸಕಲೇಶಪುರ ತಾಲೂಕಿನ ಶುಕ್ರವಾರಸಂತೆಯಲ್ಲಿ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದರೆ ತಾನೇ ನಿಷೇಧಿಸುವುದು ಎಂದು ತಿರುಗೇಟು ನೀಡಿದ್ದಾರೆ. ಈ ಚುನಾವಣೆ ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲು ಶಾಶ್ವತವಾಗಿ ಬಂದ್ ಆಗಲಿದೆ. ಬಿಜೆಪಿಯವರು ಹೋಗುತ್ತಿರುವ ಮಾರ್ಗ ನೋಡಿದರೆ ಅದೇ ರೀತಿ ಅನಿಸುತ್ತಿದೆ
ಏನಾದರೂ ಅಲ್ಪಸ್ವಲ್ಪ ಬದಲಾವಣೆ ಮಾಡಿಕೊಂಡರೆ ಉಳಿಯುತ್ತಾರೆ ಎಂದು ಹೇಳಿದ್ದಾರೆ.
ನ್ಯಾಯಕ್ಕೆ, ಧರ್ಮಕ್ಕೆ, ಸತ್ಯಕ್ಕೆ ಹೋರಾಟ ಮಾಡಿರುವ ಸಮಾಜ ಇದು.ಈ ಸಮಾಜದಲ್ಲಿ ಇಲ್ಲದೇ ಇರುವ ಉರೀಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿ ಮಾಡಿ ಈ ಸಮಾಜಕ್ಕೆ ಅಗೌರವ ತರುವ ಇಂತಹ ಕೀಳುಮಟ್ಟದ ರಾಜಕಾರಣಿಗಳ ಬಗ್ಗೆ ಜನ ಅಷ್ಟು ಸುಲಭವಾಗಿ ಬಿಡಲ್ಲ ಸರ್ವನಾಶ ಮಾಡುತ್ತಾರೆ ಎಂದರು.