ಕುಂಬಳೆ;ಸಾಯುವುದಾಗಿ ಗೆಳೆಯರಿಗೆ ಹೇಳಿ ಮೊಬೈಲ್ ಸ್ವಿಚ್ಢ್ ಆಫ್ ಮಾಡಿದ್ದ ಬಂಬ್ರಾಣ ಶಾಲೆಯ ಬಳಿ ನಿವಾಸಿ ಯುವಕನ ಮೃತದೇಹ ಮಂಗಳೂರಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬಂಬ್ರಾಣ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜೇಶ್ ಕುಮಾರ್(28) ಮೃತರು.ಇವರ ಮೃತದೇಹ ಮಂಗಳೂರು ನೇತ್ರಾವತಿ ನದಿಯಲ್ಲಿ ತಡರಾತ್ರಿ ಪತ್ತೆಯಾಗಿದೆ.
ಮೃತದೇಹವನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.ಮನೆಯವರು ಆಸ್ಪತ್ರೆಗೆ ತೆರಳಿ ಗುರುತು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.
ಅತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಮೃತರು ತಂದೆ, ತಾಯಿ,ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.