ಕುಂಪಲ ಅಶ್ವಿನಿ ಆತ್ಮಹತ್ಯೆ ಕೇಸ್ ಗೆ ಸ್ಪೋಟಕ‌ ಟ್ವಿಸ್ಟ್; ಹೊಸ ಮನೆಯ ಗೃಹಪ್ರವೇಶದಂದು ಮನೆಯಲ್ಲಿ ನಡೆದಿದ್ದೇನು ಗೊತ್ತಾ?

ಉಳ್ಳಾಲ:ಕುಂಪಲದಲ್ಲಿ ಅಶ್ವಿನಿ‌ ಎಂಬ ಯುವತಿಯ ಆತ್ಮಹತ್ಯೆ ಕೇಸ್ ಇದೀಗ ಸ್ಪೋಟಕ ಟ್ಬಿಸ್ಟ್ ಸಿಕ್ಕಿದೆ.

ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ಹೊಸ ಮನೆಯಲ್ಲಿ ಅಶ್ವಿನಿ ಬಂಗೇರ (25) ಆತ್ಮಹತ್ಯೆ ಮಾಡಿಕೊಂಡಿದ್ದರು.ಅಶ್ವಿನಿ ತಾಯಿ ಜೊತೆ ವಾಸ ಮಾಡುತ್ತಿದ್ದು, ಕುಟುಂಬಕ್ಕೆ ಆಧಾರವಾಗಿದ್ದರು.

ಅತ್ಮಹತ್ಯೆ ಸ್ಥಳದಲ್ಲಿ ಡೆತ್ ನೋಟು ಪತ್ತೆಯಾಗಿತ್ತು.
ದುಬೈನಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಕೆಲ ದಿನಗಳ ಹಿಂದೆಯಷ್ಟೇ ಊರಿಗೆ ಆಗಮಿಸಿದ್ದರು.ಇವರಿಗೆ ಸಂಗೀತಾ ಎಂಬ ಮಹಿಳೆಯ ಪರಿಚಯವಾಗಿದ್ದು, ಇದರಿಂದ ಸಂಗೀತಾ ಸಲಹೆಯಂತೆ ಕುಂಪಲ ಚಿತ್ರಾಂಜಲಿನಗರದಲ್ಲಿರುವ ಮನೆಯನ್ನು ಖರೀದಿಸುವುದಾಗಿ ವಿಶ್ವಾಸ ನೀಡಿದ್ದರು. ಅದರಂತೆ ಬ್ಯಾಂಕ್ ಸಾಲ ಮರುಪಾವತಿಯಾದ ತಕ್ಷಣ ಅಶ್ವಿನಿ ಹೆಸರಿಗೆ ಹೊಸ ಮನೆಯನ್ನು ನೋಂದಾವಣಿ ಮಾಡುವ ಬಗ್ಗೆ ಒಪ್ಪಂದ ನಡೆದಿತ್ತು.

ಸಂಗೀತಾ ಮನೆಗೆಂದು ಬ್ಯಾಂಕಿನಿಂದ ತೆಗೆದ ರೂ.18 ಲಕ್ಷ ಮರುಪಾವತಿ ಬಾಕಿಯಿತ್ತು.ಅದಕ್ಕಾಗಿ ಅಶ್ವಿನಿಗೆ ಮನೆ ನೀಡುವುದಕ್ಕೆ ಮುಂಚಿತವಾಗಿ ರೂ.7 ಲಕ್ಷ ನಗದು ಪಡೆದು, ನಂತರ 8 ತಿಂಗಳ ಕಾಲ ರೂ.17,000 ಇಎಂಐ ಆಕೆಯ ಬಳಿ ಪಾವತಿಸಿದ್ದಳು. ಜೂ. 5 ರಂದು ಚಿತ್ರಾಂಜಲಿನಗರದಲ್ಲಿ ಸಂಬಂಧಿಕರ, ಗೆಳೆಯರ ಸಮ್ಮುಖದಲ್ಲಿ ಅದ್ಧೂರಿಯಾಗಿ ಗೃಹಪ್ರವೇಶ ನಡೆದಿತ್ತು.

ಆದರೆ ಹೊಸ‌ ಮನೆಯ ಗೃಹ ಪ್ರವೇಶದ ದಿನ
ಲೋನ್ ಪಡೆದಿದ್ದ ಬ್ಯಾಂಕ್ ಸಿಬ್ಬಂದಿ ಸೀಝರ್ ಗಳು ಮನೆಗೆ ಆಗಮಿಸಿದ್ದು, ಮನೆಮಂದಿ ಲೋನ್ ಪಾವತಿಸದೆ ಇದ್ದಲ್ಲಿ ಮನೆಯನ್ನು ಹರಾಜು ನಡೆಸುವುದಾಗಿ ಬೆದರಿಸಿದ್ದಾರೆ.

ಅಲ್ಲದೆ ಕಳೆದ 1 ವರ್ಷದಿಂದ ಇಎಂಐ ಪಾವತಿಸದೆ ಇರುವುದನ್ನು ತಿಳಿಸಿ ತೆರಳಿದ್ದರು. ನೆಂಟರ ಮುಂದೆ ತನ್ನ ಸಾಧನೆಯನ್ನು ತೋರಿಸುವ ಹಂತದಲ್ಲಿ ಯುವತಿಯ ಮರ್ಯಾದೆ ಹೋಯಿತೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು.

ಜೂ.8 ರಂದು ಬ್ಯಾಂಕ್ ಗೆ ಬರುವಂತೆ ಅಶ್ವಿನಿಗೆ ಸಿಬ್ಬಂದಿ ತಿಳಿಸಿ ತೆರಳಿದ್ದರು. ಇದರಿಂದ ಇನ್ನಷ್ಟು ಖಿನ್ನತೆಗೆ ಜಾರಿದ್ದ ಅಶ್ವಿನಿ 15 ಪುಟಗಳ ಡೆತ್ ನೋಟ್ ಬರೆದಿಟ್ಟು ಫ್ಯಾನಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌

ಡೆತ್ ನೋಟಲ್ಲಿ ಅಶ್ವಿನಿ ಯಾರ ವಿರುದ್ಧವು ಕ್ರಮ ಕೈಗೊಳ್ಳದಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದರಂತೆ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ.

ಅಶ್ವನಿ ತಾಯಿ ದೇವಕಿ, ಸಂಗೀತಾ ಹಾಗೂ ಗೃಹಪ್ರವೇಶದಂದೇ ಮನೆಗೆ ಬಂದಿದ್ದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೂರು ನೀಡಿದಲ್ಲಿ ಆತ್ಮಹತ್ಯೆ ಪ್ರಚೋದನೆ ಕೇಸ್ ದಾಖಲಾಗಲಿದೆ.

ಮಗಳ ಸಾವಿನಿಂದ ನೊಂದಿರುವ ತಾಯಿ ದೇವಕಿ, ಮಗಳ ಸಾವಿಗೆ ಆಕೆಯ ಸ್ನೇಹಿತರೇ ಕಾರಣ ಎಂದು ಕಣ್ಣೀರು ಹಾಕಿದ್ದಾರೆ.

ಟಾಪ್ ನ್ಯೂಸ್