ಉಳ್ಳಾಲ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಳ್ಳಾಲ:ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಕುಂಪಲ ಮೂರು ಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಕ್ಷಯ್‌, ತಾಯಿ ಬೀಡಿ ತೆಗೆದುಕೊಂಡು ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ಅಕ್ಷಯ್ ತೊಕ್ಕೊಟ್ಟಿನ ಮೊಬೈಲ್ ಸೆಂಟರ್ ವೊಂದರಲ್ಲಿ ಕೆಲಸಕ್ಕಿದ್ದು ಕಳೆದ 20 ದಿನಗಳಿಂದ ಕೆಲಸಕ್ಕೆ ಹೋಗಿಲ್ಲ ಎನ್ನಲಾಗಿದೆ.ಖಿನ್ನತೆಯಿಂದ ಅಕ್ಷಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂಪಲ ಈ ಪ್ರದೇಶದಲ್ಲಿ ಇತ್ತೀಚೆಗೆ ಕೆಲ ಆಕಸ್ಮಿಕ ಸಾವುಗಳು ವರದಿಯಾಗುತ್ತಿದ್ದು ಜನರು ಮಧ್ಯೆ ಒಂದು ರೀತಿಯ ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ