ಬೈಕ್ ಗೆ ಕಾರು ಢಿಕ್ಕಿ, ಯುವಕ‌ ಮೃತ್ಯು, ಇನ್ನೋರ್ವ ಗಂಭೀರ

ಕುಂದಾಪುರ:ಕಾರು- ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ನಡೆದಿದೆ.

ಪ್ರಶಾಂತ್ ಪೂಜಾರಿ (25) ಮೃತರು.ಘಟನೆಯಲ್ಲಿ ಬೈಕ್ ಸಹಸವಾರ ವಿಘ್ನೇಶ್ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಇವರಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಇಬ್ಬರಿಗೂ ಗಂಭೀರ ಗಾಯಗಳಾಗಿತ್ತು.ಪ್ರಶಾಂತ್ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು
ಬೈಕ್ ಗೆ ಢಿಕ್ಕಿಯಾಗಿ ಬಳಿಕ ಮುಂದಿನಿಂದ ಬರುತ್ತಿದ್ದ ಬಸ್ ಗೂ ಢಿಕ್ಕಿಯಾಗಿದೆ.ಅಪಘಾತದಲ್ಲಿ ಬಸ್ ನ ಮುಂಭಾಗಕ್ಕೂ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್