ಕುಂದಾಪುರ;ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ
ವರದಿಯಾಗಿದೆ.
ಕಾಳಾವರ ನರಿಕೊಡ್ಲು ಮನೆ ನಿವಾಸಿ ಹರೀಶ್ ಪೂಜಾರಿ (37)ಮೃತ ದುರ್ದೈವಿ.
ಹರೀಶ್ ಪೂಜಾರಿ ಮೀನು ಹಿಡಿಯಲು ಮೂವರು ಸ್ನೇಹಿತರ ಜೊತೆ ಕಾಳಾವಾರ ದೇವಸ್ಥಾನದ ಸಮೀಪದ ಕೆರೆಗೆ ತೆರಳಿದ್ದು ಈ ವೇಳೆ ಮೀನು ಹಿಡಿಯಲು ಹರೀಶ್ ನೀರಿಗಿಳಿದಾಗ ನೀರಿನಲ್ಲಿ ಮುಳುಗಿದ್ದಾರೆ.
ಈ ಬಗ್ಗೆ ಸ್ನೇಹಿತರು ಸ್ಥಳೀಯರಿಗೆ ವಿಚಾರ ತಿಳಿಸಿದ್ದು, ರಾತ್ರಿಯೇ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರ ಆಗಮಿಸಿ ಅಗ್ನಿಶಾಮಕ ದಳದವರು, ಸ್ಥಳೀಯರ ಸಹಾಕರದಿಂದ ಹುಡುಕಾಟ ನಡೆಸಿದ್ದರು.
ಹುಡುಕಾಟದ ಬಳಿಕ ಮೃತದೇಹ ಪತ್ತೆಯಾಗಿದೆ.ಈ ಕುರಿತು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.