ಕುಂದಾಪುರ;ಯುವತಿ ಜೊತೆ ಅಸಭ್ಯವಾಗಿ ವರ್ತನೆ ಆರೋಪ, ಯುವಕನಿಗೆ ಥಳಿತ

-ನಜೀರ್ ಬಂಧಿತ ಆರೋಪಿ

ಕುಂದಾಪುರ:ವಿದ್ಯಾರ್ಥಿನಿಯ ಜೊತೆ ಅಸಭ್ಯವರ್ತನೆ ತೋರಿದ್ದಾನೆಂದು ಆರೋಪಿಸಿ ಯುವಕನಿಗೆ ಯುವತಿ ಸೇರಿ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ‌

ಬಾರ್ಕೂರು ಮೂಲದ ನಜೀರ್(35) ಎಂಬಾತ ಆರೋಪಿಯೆಂದು ಗುರುತಿಸಲಾಗಿದೆ. ಸ್ಥಳೀಯರ ಸೂಚನೆಯಂತೆ ವಿದ್ಯಾರ್ಥಿನಿಯು ಆರೋಪಿಗೆ ನಡುರಸ್ತೆಯಲ್ಲೇ ಚಪ್ಪಲಿಯೇಟು ನೀಡಿದ್ದಾಳೆ.

ವಿದ್ಯಾರ್ಥಿನಿ ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಬೀಜಾಡಿ ರಸ್ತೆಯಲ್ಲಿ ಆರೋಪಿ ನಝೀರ್ ಹಿಂದಿನಿಂದ ಬಂದು ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಭಯಗೊಂಡ ವಿದ್ಯಾರ್ಥಿನಿ ಬೊಬ್ಬೆ ಹಾಕಿದ್ದು ಕೂಡಲೇ ಸ್ಥಳಕ್ಕೆ ಬಂದ ಸ್ಥಳೀಯರು ಆತನಿಗೆ ಹಿಡಿದಿದ್ದಾರೆ.

ಸ್ಥಳೀಯರು ಆರೋಪಿ ನಝೀರ್ ನನ್ನು ಹಿಡಿದಿದ್ದು ವಿದ್ಯಾರ್ಥಿನಿ ಚಪ್ಪಲಿ ಏಟು ನೀಡುವ ದೃಶ್ಯಗಳು ವೈರಲ್ ಆಗಿದೆ.

ಬಳಿಕ ಸ್ಥಳೀಯರು ಆರೋಪಿಗೆ ಪೊಲೀಸರಿಗೆ ಒಪ್ಪಿಸಿದ್ದು, ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಲಂಗಾಣ;ನೂತನ ಎಐಸಿಸಿ ಕಾರ್ಯದರ್ಶಿಗಳಾಗಿ ಮನ್ಸೂರ್ ಅಲಿ ಖಾನ್ ನೇಮಕ

ತೆಲಂಗಾಣದಲ್ಲಿ ಚುನಾವಣಾ ಕಾವು ಏರುತ್ತಿದ್ದು, ಮನ್ಸೂರ್ ಅಲಿ ಖಾನ್ ಅವರನ್ನು ಎಐಸಿಸಿ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಲಾಗಿದೆ‌.ಅವರು ಎಐಸಿಸಿ ತೆಲಂಗಾಣ ಉಸ್ತುವಾರಿ ಜೊತೆ ಕಾರ್ಯ ನಿರ್ವಹಿಸಲಿದ್ದಾರೆ.

ಎಐಸಿಸಿ ಕಾರ್ಯದರ್ಶಿ ಪಿ.ಸಿ.ವಿಷ್ಣುನಾಧ್ ಅವರನ್ನು ಈಗಿನ ಕರ್ನಾಟಕ ಹೊಣೆಗಾರಿಕೆಯಿಂದ ಮುಕ್ತಗೊಳಿಸಲಾಗಿದ್ದು, ಅವರೂ ಕೂಡ ಎಐಸಿಸಿ ತೆಲಂಗಾಣ ಉಸ್ತುವಾರಿ ಜೊತೆ ಕಾರ್ಯ ನಿರ್ವಹಿಸಲಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ