ಕುಂದಾಪುರದಲ್ಲಿ ವ್ಯಕ್ತಿಯೋರ್ವನ ಬರ್ಬರ ಕೊಲೆ

ಕುಂದಾಪುರ:ವ್ಯಕ್ತಿಯೋರ್ವನನ್ನು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ‌ ಮಾಡಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ನಡೆದಿದೆ.

ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಈತನೊಂದಿಗೆ ಇದ್ದ ಇನ್ನೋರ್ವ ವಲಸೆ ಕಾರ್ಮಿಕ ಮಂಡ್ಯ ಮೂಲದ ರಾಜಾ (36) ಕೊಲೆ ಮಾಡಿದ್ದಾನೆ.ಸಂಗಪ್ಪ ಹಾಗೂ ರಾಜಾ ಕುಂದಾಪುರದಲ್ಲಿ ವಲಸೆ ಕಾರ್ಮಿಕರಾಗಿದ್ದು, ಕೆಲಸವಿದ್ದಾಗ ಕುಂದಾಪುರಕ್ಕೆ ಬಂದು ಅಲ್ಲಿ ಉಳಿಯುತ್ತಿದ್ದರು.

ವಿಪರೀತ ಮದ್ಯಪಾನ ಮಾಡಿದ್ದ ರಾಜಾ ಹಾಗೂ ಸಂಗಪ್ಪ ನಡುವೆ ಕ್ಷುಲ್ಲಕ ಕಾರಣಕ್ಕೆ ಚಕಮಕಿ ನಡೆದಿದ್ದು, ಶೆಡ್ ಎದುರಿನ ಮನೆ ಪಂಚಾಂಗದ ಮೇಲೆ ಮಲಗಿದ್ದ ಸಂಗಪ್ಪನ ತಲೆಯ ಮೇಲೆ ರಾಜಾ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ.

ಕೊಲೆ ಬಳಿಕ ರಾಜಾ ಮಾಲೀಕನ ಮನೆಗೆ ಬಂದು ಮಾಹಿತಿ ನೀಡಿದ್ದು ಮಾಲಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್