ಕುಂದಾಪುರ:ತಾಯಿಯ ಜೊತೆ ಆಸ್ಪತ್ರೆಗೆ ಬಂದಿದ್ದ ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾ.ಹೆ. 66ರ ತಲ್ಲೂರು ಸಮೀಪದ ರಾಜಾಡಿಯಲ್ಲಿ ನಡೆದಿದೆ.
ರವಿರಾಜ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ಯುವಕ.
ಅನಾರೋಗ್ಯದಿಂದ ಬಳಲುತ್ತಿದ್ದ ರವಿರಾಜ್ ನ್ನು ತಾಯಿ ಪರೀಕ್ಷೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.ಈ ವೇಳೆ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಬಂದು, ತಲ್ಲೂರು ಸಮೀಪದ ರಾಜಾಡಿಯ ಹೆದ್ದಾರಿಯಲ್ಲಿರುವ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರವಿರಾಜ್ ಅವರ ಮೃತದೇಹವನ್ನು ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಮೇಲೆತ್ತಲಾಗಿದೆ.ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.