ಬೆಳಗಾವಿ:ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಲಕ್ಷ್ಮಣ ಸವದಿ ಅವರು ಬಿಜೆಪಿಗ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಬೆಳಗಾವಿಯ ಅಥಣಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ,ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್ ಸಿಗುವ ವಿಶ್ವಾಸವಿತ್ತು.ಅಥಣಿ ಕ್ಷೇತ್ರದಲ್ಲಿ ಜನರೇ ಹೈಕಮಾಂಡ್. ಬಿಜೆಪಿ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ.
ಟಿಕೆಟ್‌ಗಾಗಿ ನಾನು ಭಿಕ್ಷೆ ಕೇಳುವುದಿಲ್ಲ. ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದೆ.ಸೌಜನ್ಯಕ್ಕಾದರೂ ಮೊದಲು ನನ್ನ ಜೊತೆ ಚರ್ಚೆ ಮಾಡಬೇಕಿತ್ತು. 20 ವರ್ಷದಿಂದ ಬಿಜೆಪಿ ಪಕ್ಷಕ್ಕೆ ನನ್ನಿಂದ ಸಮಸ್ಯೆಯಾಗಿದ್ದರೆ ಕ್ಷಮೆ ಇರಲಿ ಎಂದು ಹೇಳಿದ್ದಾರೆ.
ಇನ್ನು ಸವದಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆದಿದೆ.ಆದರೆ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರುವ ಬಗ್ಗೆ ಪಕ್ಷದಲ್ಲಿ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ಹಿರಿಯ ನಾಯಕರ ಮಟ್ಟದಲ್ಲಿ ಈ ರೀತಿಯ ಚರ್ಚೆ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ ಎಂದೂ ಜಾರಕಿಹೊಳಿ ತಿಳಿಸಿದ್ದಾರೆ.