ಮುಂಬೈ; ಮೋದಿ ಖಾತೆಗೂ 15 ಲಕ್ಷ ಹಣ ಹಾಕುತ್ತೇನೆ ಎಂದು ಹೇಳಿದ್ದರು. ನಾನು ಅವರ ಮಾತಿಗೆ ಮೋಸ ಹೋಗಿ ಖಾತೆಯೊಂದನ್ನು ತೆರೆದೆ ಎಂದು ಆರ್ ಜೆಡಿ ಪಕ್ಷದ ವರಿಷ್ಠ ಲಾಲೂ ಪ್ರಸಾದ್ ಯಾದವ್ ವ್ಯಂಗ್ಯವಾಡಿದ್ದಾರೆ.
INDIA ಮೈತ್ರಿಕೂಟದ ಪಕ್ಷಗಳ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಲಾಲೂ ಪ್ರಸಾದ್ ಯಾದವ್ ಹಾಸ್ಯಭರಿತ ಮಾತುಗಳನ್ನಾಡಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯನ್ನು ಸೂರ್ಯಲೋಕಕ್ಕೆ ಕಳಿಸಲು ಇಸ್ರೊ ವಿಜ್ಞಾನಿಗಳು ಸಿದ್ಧವಾಗಬೇಕು ಎಂದು ಹೇಳಿದ್ದಾರೆ.
ನಾವು ಈ ಹೋರಾಟವನ್ನು ಪ್ರಬಲವಾಗಿ ನಡೆಸುತ್ತೇವೆ, ನಾವೆಲ್ಲರೂ ಒಗ್ಗಟ್ಟಾಗಿರುತ್ತೇವೆ.ಸೀಟು ಹಂಚಿಕೆಯಲ್ಲಿ ಯಾವುದೇ ಸಮಸ್ಯೆ ಅಥವಾ ತೊಡಕುಂಟಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
INDIA ಮೈತ್ರಿಕೂಟದ ಬಲವರ್ಧನೆ ಮಾಡುತ್ತೇವೆ ಹಾಗೂ ದೇಶವನ್ನು ರಕ್ಷಿಸಲು ಮೋದಿಯನ್ನು ಅಧಿಕಾರದಿಂದ ತೆಗೆಯುತ್ತೇವೆ ಎಂಬ ಭರವಸೆಯನ್ನು ರಾಹುಲ್ ಗಾಂಧಿಗೆ ನೀಡಲು ನಾನು ಬಯಸುತ್ತೇನೆ ಎಂದು ಲಾಲೂ ಪ್ರಸಾದ್ ಯಾದವ್ ಹೇಳಿದರು.
ವಿರೋಧ ಪಕ್ಷಗಳ ಮೈತ್ರಿಕೂಟವಾದ INDIAದ ನಾಯಕರು ಒಗ್ಗಟ್ಟಿನಿಂದ 2024ರ ಚುನಾವಣೆಯನ್ನು ಎದುರಿಸಲು ನಿರ್ಧರಿಸಿದ್ದಾರೆ.