ನವದೆಹಲಿ;ಬಿಜೆಪಿ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಹೇಳಿದ್ದಾರೆ.
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಜೆಪಿ ಮತ್ತು ಆರ್ಎಸ್ಎಸ್ ಅಲ್ಪಸಂಖ್ಯಾತರ ವಿರುದ್ಧವಾಗಿವೆ.ಬಿಜೆಪಿ ಮತ್ತು ಆರೆಸ್ಸೆಸ್ ದೇಶದ ಅಲ್ಪಸಂಖ್ಯಾತರು ಹಾಗೂ ಸಮಾಜದ ದುರ್ಬಲ ವರ್ಗಗಳ ವಿರುದ್ಧವಾಗಿದೆ ಎಂದು ಹೇಳಿದರು.
ಬಿಜೆಪಿ ಮತ್ತು ಆರೆಸ್ಸೆಸ್ ಮೀಸಲಾತಿಗೆ ವಿರುದ್ಧವಾಗಿದ್ದು, ಸಂವಿಧಾನವನ್ನು ಬದಲಾಯಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಲಾಲು ಪ್ರಸಾದ್ ಆರೋಪಿಸಿದ್ದಾರೆ.