ವಿಪಕ್ಷ ನಾಯಕನ ಸ್ಥಾನ ಜೆಡಿಎಸ್ ಮನೆ ಬಾಗಿಲಿಗೆ ಬರುತ್ತದೆ- ಶಾಸಕ ಲಕ್ಷ್ಮಣ ಸವದಿ ಸ್ಪೋಟಕ ಹೇಳಿಕೆ

ಬೆಂಗಳೂರು;ವೈಟ್ ಆಂಡ್ ಸಿ, ವಿರೋಧ ಪಕ್ಷದ ನಾಯಕ ಸ್ಥಾನ ಜೆಡಿಎಸ್ ಮನೆ ಬಾಗಿಲಿಗೆ ಬರುತ್ತದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಮಂಗಳವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ಚರ್ಚೆಯ ವೇಳೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಗೊತ್ತಿದೆ, ವಿರೋಧ ಪಕ್ಷದ ನಾಯಕ ಸ್ಥಾನ ನಿಮ್ಮ ಮನೆ ಬಾಗಿಲಿಗೆ ಬರುವ ಸಾಧ್ಯತೆ ಇದೆ ಎಂದಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರನ್ನ ಅಧಿಕಾರದಿಂದ ಇಳಿಸಿದ್ರು, ಆದರೆ ಅವರನ್ನು ಯಾಕೆ ಇಳಿಸಿದ್ರು ಅನ್ನೋದು ಗೊತ್ತಿಲ್ಲ.

ಈ ವೇಳೆ ಜಿಟಿ ದೇವೇಗೌಡ, ಲಕ್ಷ್ಮಣ್ ಸವದಿ ಅವರು ಉಪ ಮುಖ್ಯಮಂತ್ರಿ ಆಗಿದ್ದರು. ಸವದಿ ಅವರೇ ನಿಮಿಗಾದ್ರೂ ಗೊತ್ತಾ..? ಎಂದು ಪ್ರಶ್ನಿಸಿದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಲಕ್ಷ್ಮಣ ಸವದಿ, ಬಿಎಸ್ ವೈ ಅವರನ್ನ ಯಾಕೆ ಇಳಿಸಿದ್ರು ಹೇಗೆ ಇಳಿಸಿದ್ರು ಅನ್ನೋದು ನಮಗಿಂತ ಹೆಚ್ಚು ನಿಮಗೆ ಗೊತ್ತಿದ್ದು, ನೀವು ಹೇಳ್ತಾ ಇಲ್ಲ ಅಷ್ಟೇ. ಆದರೆ ವಿರೋಧ ಪಕ್ಷದ ನಾಯಕ ಇಲ್ಲ ಅಂತ ಹೇಳುತ್ತಿದ್ದೀರಲ್ವಾ, ಅದಕ್ಕೋಸ್ಕರನೇ ಎರಡನೇ ಸೀಟ್ ನಲ್ಲಿ ಯಾರೂ ಕೂರುತ್ತಿಲ್ಲ.ಕುಮಾರಸ್ವಾಮಿ ಅವರು ಮಾತ್ರ ವಿರೋಧ ಪಕ್ಷದಲ್ಲಿ ಕೂತು ಕೆಲಸ ಮಾಡ್ತಾ ಇದ್ದಾರೆ. ಅದಕ್ಕಾಗಿಯೇ ಇನ್ನೂ ಆಯ್ಕೆ ಮಾಡಿಲ್ಲ ಎಂದು ಹೊರಗೆ ಚರ್ಚೆ ನಡೀತಾ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್