ಜನ ಸಮಾನ್ಯರ ವಿರೋಧದ ಬೆನ್ನಲ್ಲೇ ಮಹತ್ವದ ನಿರ್ಧಾರವೊಂದರಿಂದ ಹಿಂದೆ ಸರಿದ ಸರಕಾರ!

ಬೆಂಗಳೂರು:ಮದ್ಯ ಖರೀದಿ ಮತ್ತು ಮಾರಾಟಕ್ಕೆ ನಿಗದಿಪಡಿಸಿದ್ದ ಕನಿಷ್ಠ ವಯಸ್ಸಿನ ಮಿತಿಯನ್ನು 21ರ ಬದಲು 18ಕ್ಕೆ ಇಳಿಸಲು ಮುಂದಾಗಿದ್ದ ನಿರ್ಧಾರದಿಂದ ಸರ್ಕಾರ ವ್ಯಾಪಕ ವಿರೋಧದ ಬೆನ್ನಲ್ಲೆ ಹಿಂದೆ ಸರಿದಿದೆ ಎನ್ನಲಾಗಿದೆ.

ಕರ್ನಾಟಕ ಅಬಕಾರಿ ಪರವಾನಗಿಗಳ (ಸಾಮಾನ್ಯ ಷರತ್ತು) ನಿಯಮಗಳು-1967ಕ್ಕೆ ತಿದ್ದುಪಡಿ ತರಲು ಅಬಕಾರಿ ಇಲಾಖೆಯು ಕರಡು ಪ್ರಸ್ತಾವನೆಯನ್ನು ಪ್ರಕಟಿಸಿತ್ತು.

ಮದ್ಯ ಖರೀದಿ ವಯಸ್ಸಿನ ಮಿತಿ ಕಡಿತ ಮಾಡಿ ಕರಡು ಅಧಿಸೂಚನೆಯನ್ನು ಸೋಮವಾರ ಪ್ರಕಟಿಸಿತ್ತು.ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಿಂದ ಭಾರೀ ಖಂಡನೆ ವ್ಯಕ್ತವಾಗುತ್ತಿದ್ದಂತೆ ಸರಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ ಎನ್ನಲಾಗಿದೆ.

ಟಾಪ್ ನ್ಯೂಸ್