ಮರದ ಕೊಂಬೆ ಕಡಿಯುವಾಗ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿಯೋರ್ವರು ಮರದಲ್ಲೇ ಸಾವು

ಚಿಕ್ಕಮಗಳೂರು;ಮರದ ಕೊಂಬೆ ಕಡಿಯಲು ಹೋಗಿದ್ದ ವ್ಯಕ್ತಿ ವಿದ್ಯುತ್ ತಂತಿ ಸ್ಪರ್ಶವಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ.

ಲೋಕಪ್ಪ ಗೌಡ (56)ಮೃತ ದುರ್ದೈವಿಯಾಗಿದ್ದಾರೆ.ಇವರು
ವಿದ್ಯುತ್ ತಂತಿ ತಗುಲಿ ಮರದ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ‌.

ವಿದ್ಯುತ್ ತಂತಿಗೆ ಮರದ ಕೊಂಬೆಗಳು ತಗಲುತ್ತಿದೆ ಎಂದು ಮರ ಕಡಿಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್