ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿಗೆ ಹಿಂದೇಟು ಹಾಕಿದ ಜೆಡಿಎಸ್? ಏನಿದು ಬೆಳವಣಿಗೆ?

ಬೆಂಗಳೂರು;ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.ಇದಕ್ಕೆ ಪೂರಕ ಎಂಬಂತೆ ಎನ್​ಡಿಎನೂ ಇಲ್ಲ,INDIA ನೂ ಇಲ್ಲ. ಸ್ವತಂತ್ರ ಹೋರಾಟ ಮಾಡ್ತೇವೆ ಎಂದು ಎಚ್​ಡಿ ದೇವೇಗೌಡರು ತಿಳಿಸಿದ್ದಾರೆ.

ಖಾಸಗಿ ಹೋಟೆಲ್‌ನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಶಾಸಕರು, ಎಂಎಲ್‌ಸಿಗಳ ಸಭೆ ನಡೆದಿದೆ.

ಸಭೆ ಬಳಿಕ ಮಾತನಾಡಿದ ಎಚ್​ಡಿಡಿ, ರಾಷ್ಟ್ರದ ರಾಜಕಾರಣದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಈ ಪಕ್ಷ ಉಳಿಸೋದು ರಾಜ್ಯದ ಜನರ ಹಿತದೃಷ್ಟಿಯಿಂದ ಅಗತ್ಯ. ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯ ಅದೆಲ್ಲವನ್ನು ಜನರ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮಾರ್ಥ್ಯ ಇದೆ ಅನ್ನೋದನ್ನು ಸಾಬೀತು ಮಾಡ್ತೇವೆ. ರಾಜಕೀಯ ಲಾಭ ಮತ್ತು ತೋರಿಕೆಗಾಗಿ ಹೇಳುತ್ತಿಲ್ಲ. ಜೀವನದ್ದುಕ್ಕೂ ಹೋರಾಟ ಮಾಡ್ತೇವೆ ಎಂದು ಹೇಳಿದ್ದಾರೆ.

ಜೆಡಿಎಸ್ ಬಿಜೆಪಿ ಮಧ್ಯೆ ಯಾವುದೇ ಸಂಬಂಧ ಕಲ್ಪಿಸಬೇಡಿ. ಬಿಜೆಪಿ ಅವರ ಹೋರಾಟ ಅವರು ಮಾಡ್ತಾರೆ. ನಮ್ಮ ಹೋರಾಟ ನಾವು ಮಾಡ್ತೇವೆ ಎಂದು ಹೇಳಿದರು.ಜೆಡಿಎಸ್ ಸಭೆಯಲ್ಲಿ ಕೆಲವರು ಎನ್‌ಡಿಎ ಜತೆ ಹೋಗಲು ವಿರೋಧಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್