ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥಗೊಂಡಿದ್ದ ಲೋಕಾಯುಕ್ತ ಡಿವೈಎಸ್ಪಿ ಸಾವು

ವಿಜಯಪುರ;ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿ ಲೋಕಾಯುಕ್ತ ಡಿವೈಎಸ್​ಪಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣ ವರದಿಯಾಗಿದೆ.

ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್​ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತರು.

ಇವರು ಇಂದು ವಿಜಯಪುರ ಜಿಲ್ಲಾ‌ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿದ್ದರು.ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಅರುಣ್ ನಾಯಕ್ ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದು, ಘಟನೆ ಕುರಿತು ಮಾಹಿತಿ ತಿಳಿದು ಆಸ್ಪತ್ರೆಗೆ ತೆರಳಿದ್ದಾರೆ.

ಕಿನ್ನಿಗೋಳಿ;ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ

ಕಿನ್ನಿಗೋಳಿ; ಜ್ಯುವೆಲರಿ ಅಂಗಡಿ ಮಾಲಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧ ವಾರ ಕಿನ್ನಿಗೋಳಿಯ ರಾಮನಗರಲ್ಲಿ ನಡೆದಿದೆ.

ಕಿನ್ನಿಗೋಳಿ ನಿವಾಸಿ ಶ್ರೀಧರ ಆಚಾರ್ಯ ಜುವೆಲರ್ಸ್‌ನ ಮಾಲಕ ಉಮೇಶ್‌ ಆಚಾರ್ಯ (62) ಆತ್ಮಹತ್ಯೆಗೈದವರು

ಮಾನಸಿಕ ಕಿನ್ನತೆಯಿಂದ ಅವರು ತನ್ನ ಮನೆಯ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಿನ್ನಿಗೋಳಿ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರಾಗಿದ್ದ ಅವರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷರಾಗಿದ್ದರು.

ಟಾಪ್ ನ್ಯೂಸ್