ವಿಟ್ಲ; ಬಿಜೆಪಿ & ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಪ್ರಕರಣ;9 ಮಂದಿ ವಿರುದ್ಧ ದೂರು ದಾಖಲು, ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ವೈರಲ್ ವಿಡಿಯೋ..

ವಿಟ್ಲ;ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಹಲ್ಲೆ ನಡೆದಿದ್ದು, ವಿಟ್ಲ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ಕೊಡಜೆ ನಿವಾಸಿ ಮಹೇಂದ್ರ(26)ನೀಡಿದ ದೂರಿನಂತೆ ಕಾಂಗ್ರೆಸ್ ಕಾರ್ಯಕರ್ತರಾದ ರಾಕೇಶ್, ಮಂಜುನಾಥ್, ರಾಜೇಶ್ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿದೆ.

ಈಶ್ವರ ನಾಯ್ಕ ಯಾನೆ ಪ್ರವೀಣ್ ನಾಯ್ಕ (28) ನೀಡಿದ ದೂರಿನ ಪ್ರಕಾರ ಮಹೇಂದ್ರ, ಪ್ರಶಾಂತ್, ಚರಂಜೀವಿ, ಪ್ರವೀಣ್ , ದೇವಿಪ್ರಸಾದ್, ಹರೀಶ್ ವಿರುದ್ಧ ದೂರು ನೀಡಲಾಗಿದೆ.

ಇನ್ನು ಮಾಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಂಗ್ರೇಸ್ ಕಾರ್ಯಕರ್ತ ಎಂದು ಹೇಳಲಾದ ವ್ಯಕ್ತಿಯೊಬ್ಬ ತನ್ನ ಗೆಳೆಯನ ಜೊತೆ ನಡೆಸುತ್ತಿದ್ದ ಸಂಭಾಷಣೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರಲ್ಲಿ ಹಲ್ಲೆ ಮಾಡಿದವರು ಮಾಣಿಯ ನಾಗು ಸಹೋದರ ರಾಕು ಮತ್ತು ತಂಡ ಎಂದು ಪೋನ್ ನಲ್ಲಿ ಹೇಳಿರುವುದು ದಾಖಲಾಗಿದೆ.

ನನಗೆ ಗಲಾಟೆ ವಿಷಯವೇ ಗೊತ್ತಿಲ್ಲ, ಬ್ಯಾಂಕ್ ಗೆ ಹಣ ಡೆಪಾಸಿಟ್ ಮಾಡಲು ಬಂದಿದ್ದೆ. ಆ ಸಂದರ್ಭದಲ್ಲಿ ಹಲ್ಲೆಗೊಳಗಾದ ಯುವಕರ ತಂಡದವರು ಎದುರುಗಡೆಯಿಂದ ಬರುತ್ತಿದ್ದರು. ಈ ವೇಳೆ ಅವರಿಂದ ತಪ್ಪಿಸಿಕೊಂಡೆ, ಆದರೆ ಬಿಜೆಪಿಯವರು ನನ್ನ ಹೆಸರನ್ನು ಪೊಲೀಸ್ ಅವ್ರಲ್ಲಿ ಹೇಳಿದ್ದಾರೆ ಎಂದು ಹೇಳುವುದು ವಿಡಿಯೋ ಒಂದು ವೈರಲ್ ಆಗಿದೆ.ಇದರ ಸತ್ಯಾಸತ್ಯತೆ ತನಿಖೆಯಿಂದ ಬಯಲಾಗಬೇಕಿದೆ.

ನಿನ್ನೆ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಗುಂಪೊಂದು ಹಲ್ಲೆ ಮಾಡಿದ ಘಟನೆ ಬಂಟ್ವಾಳದ ಮಾಣಿ ಎಂಬಲ್ಲಿ ನಡೆದಿತ್ತು. ಮಾಣಿ ಜಂಕ್ಸನ್ ನಲ್ಲಿ ಆಕ್ಟೀವ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿದ ತಂಡ ಹಲ್ಲೆ ನಡೆಸಿದೆ ಎಂದು ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com