ವಿಟ್ಲ;ಮಾಣಿ ನಿವಾಸಿ ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

-ಇರ್ಷಾದ್ ಉಮರ್( 33)ಮೃತ ಯುವಕ

ವಿಟ್ಲ; ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ.

ಇರ್ಷಾದ್ ಉಮರ್( 33)ಮೃತ ಯುವಕ.ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು.

ಅವರಿಗೆ ಆಸ್ಪತ್ರಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಅವರಿಗೆ ರಕ್ತದ ಅವಶ್ಯಕತೆ ಇದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ‌ ಸಂಗ್ರಹಿಸಲಾಗಿತ್ತು.

ಆದರೆ ನಿನ್ನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಮೃತರು ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್