ಮಂಗಳೂರು; ಸ್ಕೂಟರ್- ಲಾರಿ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು

ಮಂಗಳೂರು; ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ.

ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಪೆರೊ(70) ಎಂದು ಗುರುತಿಸಲಾಗಿದೆ.

ಟೈಟಸ್ ಅವರು ಜೋಕಟ್ಟೆ ಕಡೆಯಿಂದ ಮಂಗಳೂರಿಗೆ
ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಸರಕು ತುಂಬಿದ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಪರಿಣಾಮವಾಗಿ ರಸ್ತೆಗೆ ಎಸೆಯಲ್ಪಟ್ಟ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.

ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ