ಬಿಜೆಪಿ ಶಾಸಕನನ್ನು ಹುಡುಕಿ ಕೊಡಿ ಎಂದು ಕಾಂಗ್ರೆಸ್ ನಿಂದ ಪೋಸ್ಟರ್ ಅಭಿಯಾನ

ಬೆಂಗಳೂರು;ಲೋಕಾಯುಕ್ತ ದಾಳಿ ವೇಳೆ ಕೋಟ್ಯಾಂತರ ಹಣ ಪತ್ತೆಯಾದ ಬಳಿಕ ಇದೀಗ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕಾಂಗ್ರೆಸ್ ಮತ್ತೊಂದು ಅಭಿಯಾನ ಶುರುಮಾಡಿದೆ.

ಬೆಂಗಳೂರು, ದಾವಣಗೆರೆ, ಚನ್ನಗಿರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಡಳ್ ಮಿಸ್ಸಿಂಗ್ ಪೋಸ್ಟರ್ ಅಂಟಿಸಿದ್ದಾರೆ.

ಪೋಸ್ಟರ್ ನಲ್ಲಿ A-1 ಆರೋಪಿಯನ್ನು ದಯವಿಟ್ಟು ಹುಡುಕಿ ಕೊಡಿ, ಎತ್ತರ 5.9 ಅಡಿ, ವಯಸ್ಸು 72, ಗೋದಿ ಮೈಬಣ್ಣ, ನಾಪತ್ತೆಯಾದ ದಿನಾಂಕ 04-03-2023. ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com