ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ವಜಾ ವಿಷಯ ತಿಳಿದು ಸಾರ್ವಜನಿಕ ಕಾರ್ಯಕ್ರಮ ಅರ್ಧಕ್ಕೆ ಮೊಟಕುಗೊಳಿಸಿ ಕಾಲ್ಕಿತ್ತಿದ್ದ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಲೋಕಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದೇಗೆ ಗೊತ್ತಾ?

ತುಮಕೂರು;ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪಗೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ತುಮಕೂರಿನ ಕ್ಯಾತಸಂದ್ರ ಟೋಲ್ ಗೇಟ್​ ಬಳಿ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪರನ್ನು ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಮಾಡಾಳ್ ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ಇಂದು ವಜಾಗೊಂಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕ ಕಾರ್ಯಕ್ರಮದಲ್ಲಿದ್ದ ಮಾಡಾಳ್ ಕಾರ್ಯಕ್ರಮ ಅರ್ಧಕ್ಕೆ ಮೊಟಕುಗೊಳಿಸಿ ನಾಪತ್ತೆಯಾಗಿದ್ದರು.ಇದೀಗ ಬಂಧನದ ಭೀತಿಯಿಂದ ಕಾರಿನಲ್ಲಿ ಬೇರೆಡೆಗೆ ತೆರಳುತ್ತಿದ್ದ ಅವರನ್ನು ಮಾರ್ಗಮಧ್ಯೆ ಅಡ್ಡಗಟ್ಟಿ ಅರೆಸ್ಟ್​ ಮಾಡಲಾಗಿದೆ.

ಶಾಸಕ ಮಾಡಾಳ್ ಚಿತ್ರದುರ್ಗದಿಂದ ಬೆಂಗಳೂರಿನತ್ತ ಕೆಎ 17 ಝಡ್ 7929 ನಂಬರಿನ ಬಿಳಿ ಇನೋವಾ ಕಾರಿನಲ್ಲಿ ತೆರಳುತ್ತಿದ್ದಾಗ ತುಮಕೂರಿನ ಟೋಲ್ ಗೇಟ್ ಬಳಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್