ಮರ್ಕಝ್, ಮದನೀಯಂ ವತಿಯಿಂದ ದಕ್ಷಿಣ ಕನ್ನಡದಲ್ಲಿ 7 ಮನೆ ಸೇರಿ 111 ಮನೆಗಳ ಹಸ್ತಾಂತರ

ಮಂಗಳೂರು;ಮರ್ಕಝ್ ಹಾಗೂ ಮದನೀಯಂ ಚಾನೆಲ್ ಬಳಗವು ಜಂಟಿಯಾಗಿ ಬಡ ಸಯ್ಯದ್ ಕುಟುಂಬಗಳಿಗೆ ನಿರ್ಮಿಸಿಕೊಡುತ್ತಿರುವ ವಸತಿ ಯೋಜನೆಯ ಮೊದಲ ಹಂತದ ಮನೆಗಳ ಹಸ್ತಾಂತರ ಮರ್ಕಝ್‌ನಲ್ಲಿ ನಡೆಯಲಿದೆ.

ಮದನೀಯಂ ಬಳಗದ ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ಈ ಕುರಿತು ಮಾಹಿತಿಯನ್ನು ನೀಡಿದ್ದು, ಬಡ ಧಾರ್ಮಿಕ ಸಾಮಾಜಿಕ ರಾಜಕೀಯ ಕ್ಷೇತ್ರದ ಪ್ರಮುಖ ನಾಯಕರ ನೇತೃತ್ವದಲ್ಲಿ 111 ಮನೆಗಳ ಕೀಲಿ ಕೈಗಳನ್ನು ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಗ್ರಾಂಡ್ ಮುಫ್ತ್ತಿ ಎ.ಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಂರವರ ನಿರ್ದೇಶನದಂತೆ ಮದನೀಯಂ ಚಾನೆಲ್ ತನ್ನ ಮೊದಲ ವರ್ಷಾಚರಣೆಯ ಅಂಗವಾಗಿ 100 ಬಡ ಸಯ್ಯದ್ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಯೋಜನೆ ಹಾಕಿತ್ತು. ಆದರೆ 406 ಅರ್ಜಿಗಳು ಬಂದಿದ್ದು, ಈ ಪೈಕಿ ಅರ್ಹರಾದ 313 ಕುಟುಂಬಗಳನ್ನು ಆಯ್ಕೆ ಮಾಡಲಾಗಿದೆ.
ಈ ಪೈಕಿ 111 ಮನೆಗಳ ನಿರ್ಮಾಣ ಪೂರ್ಣಗೊಂಡಿದ್ದು, ಹಸ್ತಾಂತರ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ಪ್ರತಿ ಮನೆಯು 650 ಚದರ ಅಡಿ ವಿಸ್ತೀರ್ಣ ಹೊಂದಿದ್ದು ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಲಾಗಿದೆ.ದ.ಕ.ಜಿಲ್ಲೆಯಲ್ಲಿ 7 ಮಂದಿಗೆ ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com